ರಾಜ್ಯ

ಸೋಷಿಯಲ್ ಮೀಡಿಯಾ ಸ್ಟೇಟಸ್ ನಲ್ಲಿ ಪಾಕಿಸ್ತಾನ ಧ್ವಜದ ಚಿತ್ರ: ಧಾರವಾಡ ಯುವಕ ಪೊಲೀಸ್ ವಶ

ಸೋಷಿಯಲ್ ಮೀಡಿಯಾದಲ್ಲಿ ಪಾಕಿಸ್ತಾನ ಪರ ಸ್ಟೇಟಸ್ ಹಾಕಿ ಧಾರವಾಡದ ಯುವಕನೊಬ್ಬ ತೊಂದರೆಗೆ ಸಿಕ್ಕಿಹಾಕಿಕೊಂಡಿದ್ದಾನೆ.

ಧಾರವಾಡ:ಸೋಷಿಯಲ್ ಮೀಡಿಯಾದಲ್ಲಿ ಪಾಕಿಸ್ತಾನ ಪರ ಸ್ಟೇಟಸ್ ಹಾಕಿ ಧಾರವಾಡದ ಯುವಕನೊಬ್ಬ ತೊಂದರೆಗೆ ಸಿಕ್ಕಿಹಾಕಿಕೊಂಡಿದ್ದಾನೆ.


ಧಾರವಾಡ ಜಿಲ್ಲೆಯ ಅಲ್ನವರ್ ನ ಮಂಕವಾಡದ ಯುವಕ ಶೈಲ್ ತನ್ನ ಸೋಷಿಯಲ್ ಮೀಡಿಯಾ ಅಕೌಂಟ್ ನ ಸ್ಟೇಟಸ್ ನಲ್ಲಿ ವಿಡಿಯೊವೊಂದನ್ನು ಹಾಕಿದ್ದ. ಅದರ ಹಿನ್ನಲೆಯಲ್ಲಿ ಪಾಕಿಸ್ತಾನ ಧ್ವಜದ ಚಿತ್ರವಿತ್ತು.


ಆತನ ಸ್ಟೇಟಸ್ ವಿಡಿಯೊವನ್ನು ಹಲವು ಸ್ನೇಹಿತರು ವೀಕ್ಷಿಸಿ ಫಾರ್ವರ್ಡ್ ಮಾಡಿದ್ದರು. ಅದು ಅಲ್ನವರ್ ಪಟ್ಟಣದಲ್ಲಿ ವೈರಲ್ ಆಗಿ ವಿಎಚ್ ಪಿ ಸಂಘಟನೆಯವರ ಕೈಗೆ ಸಿಕ್ಕಿತು. ಕೂಡಲೇ ವಿಎಚ್ ಪಿ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದರು. 


ಕೂಡಲೇ ಪೊಲೀಸರು ಯುವಕನನ್ನು ವಶಕ್ಕೆ ತೆಗೆದುಕೊಂಡು ಕಸ್ಟಡಿಗೊಪ್ಪಿಸಿದರು. ಇದೀಗ ತನಿಖೆ ನಡೆಸುತ್ತಿದ್ದು ಆತನ ವಿರುದ್ಧ ಯಾವ ಕೇಸು ದಾಖಲಿಸುತ್ತಾರೆ ಎಂಬುದು ತಿಳಿದುಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ