ಸಂಗ್ರಹ ಚಿತ್ರ 
ರಾಜ್ಯ

ಚಿತ್ರದುರ್ಗ: 10 ತಿಂಗಳ ಮಗು ಕೊಂದು, ತಾಯಿ ನೇಣಿಗೆ ಶರಣು

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬಳು ತನ್ನ 10 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ  ವಿದ್ರಾವಕ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಐನಳ್ಳಿ ಗ್ರಾಮದಲ್ಲಿ  ನಡೆದಿದೆ. 

ಚಿತ್ರದುರ್ಗ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬಳು ತನ್ನ 10 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ  ವಿದ್ರಾವಕ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಐನಳ್ಳಿ ಗ್ರಾಮದಲ್ಲಿ  ನಡೆದಿದೆ. 

ಐನಳ್ಳಿ ಗ್ರಾಮದ ಆಶಾಬಾಯಿ (24) ಮೃತ ಮಹಿಳೆ. ಹೆರಿಗೆಯ  ನಂತರ ಅನಾರೋಗ್ಯ ಕಾಡುತ್ತಿದ್ದ ಹಿನ್ನೆಲೆಯಲ್ಲಿ ಮೃತರು ಮಾನಸಿಕ ಖಿನ್ನತೆಗೆ  ಒಳಗಾಗಿದ್ದರು.  ಮಗುವನ್ನು ನೀರಿನ ಟಬ್​ನಲ್ಲಿ ಮುಳುಗಿಸಿ ಕೊಂದ ಬಳಿಕ, ಅವರು  ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೆರಿಗೆ  ನಂತರ  ಅನಾರೋಗ್ಯದಿಂದ ಬಳಲುತ್ತಿದ್ದೆ. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಂಡರೆ ಮಗು  ಅನಾಥವಾಗುತ್ತದೆ ಎಂದು ಭಾವಿಸಿ, ಮಗುವನ್ನು ಕೊಂದಿರುವುದಾಗಿ ಅವರು ಸಾಯುವ ಮುನ್ನ  ಡೆತ್  ನೋಟ್ ನಲ್ಲಿ ಬರೆದಿಟ್ಟಿದ್ದಾರೆ.

ಆಶಾಬಾಯಿ ಲಂಬಾಣಿಹಟ್ಟಿಯ ಹೇಮಂತ್​ ಜತೆ ಎರಡು ವರ್ಷದ ಹಿಂದೆ  ವಿವಾಹ ಆಗಿದ್ದರು ಎನ್ನಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಚಿಕ್ಕಜಾಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!