ಬೀದರ್: ಸಚಿವ ಪ್ರಭು ಚೌಹಾಣ್ಗೆ ಸೇರಿದ ಕಾರು ಪಲ್ಟಿ
ಸಚಿವ ಪ್ರಭು ಚೌಹಾಣ್ ಅವರಿಗೆ ಸೇರಿರುವ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಬಳಿ ನಡೆದಿದೆ.
ಬೀದರ್: ಸಚಿವ ಪ್ರಭು ಚೌಹಾಣ್ ಅವರಿಗೆ ಸೇರಿರುವ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಬಳಿ ನಡೆದಿದೆ.
ಬೀದರ್ನಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಸರ್ಕಾರಿ ಗಾಡಿಯಲ್ಲಿ ಪ್ರಭು ಚವಾಣ್ ಸಂಚರಿಸುತ್ತಿದ್ದರು. ಅವರ ಸ್ವಂತ ಕಾರಾದ ಫಾರ್ಚುನರ್ನಲ್ಲಿ ಅವರ ಗನ್ ಮ್ಯಾನ್ ಮತ್ತು ಕೆಲ ಕಾರ್ಯಕರ್ತರು ಪ್ರಯಾಣಿಸುತ್ತಿದ್ದರು. ರಸ್ತೆಯಲ್ಲಿ ಅವರ ಸ್ವಂತ ಕಾರಿನ ನಿಯಂತ್ರಣ ತಪ್ಪಿದ್ದು ಪಲ್ಟಿಯಾಗಿ ಬಿದ್ದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಣ್ಣ ಪುಟ್ಟ ಗಾಯಗಳಾಗಿರುವುದು ವರದಿಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.