ಸಿಎಂ ಯಡಿಯೂರಪ್ಪ 
ರಾಜ್ಯ

78ನೇ ವಸಂತಕ್ಕೆ ಕಾಲಿಟ್ಟ ಸಿಎಂ ಯಡಿಯೂರಪ್ಪ: ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮ, ಕೇಂದ್ರ ಸಚಿವರು ಸೇರಿ ಗಣ್ಯಾತಿಗಣ್ಯರು ಭಾಗಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 78ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 78ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. 

ನಗರದ ಅರಮನೆ ಮೈದಾನದ ವೈಟ್ ಪೆಟಲ್ಸ್ ನಲ್ಲಿ ಸಂಜೆ 5 ಗಂಟೆಗೆ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು  ಉದ್ಘಾಟನೆ ನೆರವೇರಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಧ್ಯಕ್ಷತೆವಹಿಸಲಿದ್ದಾರೆ. 

ಯಡಿಯೂರಪ್ಪ ಅವರ ಕುರಿತು ವಿವಿಧ ಕ್ಷೇತ್ರಗಳ ಅವರ ಒಡನಾಡಿಗಳು ಬರೆದಿರುವ ಲೇಖನಗಳನ್ನು ಒಳಗೊಂಡ ದಣಿವರಿಯದ ಧೀಮಂತ ಎಂಬ ಅಭಿನಂದನಾ ಗ್ರಂಥವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಿಡುಗಡೆಗೊಳಿಸಲಿದ್ದಾರೆ. ವಿಧಾನಸಭೆ ವಿಪಕ್ಷದ ನಾಯಕ ಸಿದ್ಧರಾಮಯ್ಯ ಕಾಫಿ ಟೇಬಲ್ ಪುಸ್ತಕ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಿದ್ದಾರೆ. 

ಸಮಾರಂಭದಲ್ಲಿ ಪಂಪ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. 

ಸಮಾರಂಭ ಸ್ಥಳದ ಪರಿಶೀಲನೆ ನಡೆಸಿದ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾತನಾಡಿ, ಇದು ಪಕ್ಷಾತೀತ ಕಾರ್ಯಕ್ರಮ. ದೊಡ್ಡ ಕಾರ್ಯಕ್ರಮ ನಡೆಸುವ ಉದ್ದೇಶವಿತ್ತು. ಆದರೆ, ಯಡಿಯೂರಪ್ಪ ಅವರೇ ಬೇಡ ಎಂದು ಹೇಳಿಿದರು. ಹಿಂದೆ ಜೆಡಿಎಸ್-ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ವೇಳೆ ರಾಜನಾಥ್ ಸಿಂಗ್ ಅವರೇ ಬಿಜೆಪಿ ಅಧ್ಯಕ್ಷರಾಗಿದ್ದರು. ಹೀಗಾಗಿ ಅವರನ್ನೇ ಉದ್ಘಾಟಕರನ್ನಾಗಿ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ. 

ಹಾರ ತುರಾಯಿ ತರದಿರಿ: ಯಡಿಯೂರಪ್ಪ ಮನವಿ
ನನ್ನ ಹುಟ್ಟುಹಬ್ಬದ ಸಂದರ್ಭ ಯಾರು ಕೂಡ ಹಾರ ತುರಾಯಿ ತರುವುದು ಬೇಡ ಎಂದು ಮುಖ್ಯಮಂತ್ರ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಎಲ್ಲರ ಹಾರೈಕೆ, ಹರಕೆ ಹಾಗೂ ಆಶೀರ್ವಾದಗಳಿಂದಲೇ ನಿಮ್ಮೆಲ್ಲರ ಸೇವೆ ಮಾಡುವ ಸ್ಥಾನದ ಸೌಭಾಗ್ಯ ಪಡೆದಿದ್ದೇನೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿ ತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದು ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT