ಚಿಕ್ಕಪೇಟೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ 
ರಾಜ್ಯ

ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿಗಳ ದಿಢೀರ್ ದಾಳಿ: ಚಿಕ್ಕಪೇಟೆಯಲ್ಲಿ 60ಕೆಜಿ ಚಿನ್ನಾಭರಣ ವಶ!

ನಗರದ ಚಿಕ್ಕಪೇಟೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಸುಮಾರು 21 ಕೋಟಿ ರೂ ಮೌಲ್ಯ 60ಕೆಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ನಗರದ ಚಿಕ್ಕಪೇಟೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಸುಮಾರು 21 ಕೋಟಿ ರೂ ಮೌಲ್ಯ 60ಕೆಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಅದಿಕಾರಿಗಳಿಗೆ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ವಿವಿಧ ಪ್ರದೇಶಗಳಲ್ಲಿದ್ದ ಲೆಕ್ಕಕ್ಕೆ ಸಿಗದ ಸುಮಾರು 60ಕೆಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆಯಲ್ಲಿರುವ ಚಿನ್ನಾಭರಣಗಳ ಹೋಲ್ ಸೇಲ್ ವ್ಯಾಪಾರ ಸ್ಥಳಗಳಾದ ರಂಗನಾಥ ಮ್ಯಾನ್ಷನ್ ಮತ್ತು ಸಕಲಾಜೀ ಮಾರ್ಕೆಟ್ ಮೇಲೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದರು. ಈ ವೇಳೆ ಲೆಕ್ಕವಿಲ್ಲದ ಸುಮಾರು 21 ಕೋಟಿ ರೂ ಮೌಲ್ಯ 60ಕೆಜಿ ಚಿನ್ನಾಭರಣಗಳ ಪತ್ತೆಯಾಗಿತ್ತು. 

ಕೂಡಲೇ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪೈಕಿ 1.3 ಕೋಟಿ ರೂ ಮೌಲ್ಯದ ಜಿಎಸ್ ಟಿ ತೆರಿಗೆ ವಂಚನೆ ಕೂಡ ಸೇರಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ