ರಾಜ್ಯ

ಬಜೆಟ್ ನಲ್ಲಿ ಮಹಾದಾಯಿ ನೀರು ಬಳಕೆಗೆ ಸೂಕ್ತ ಅನುದಾನ: ಸಿಎಂ ಯಡಿಯೂರಪ್ಪ

Lingaraj Badiger

ಬೆಂಗಳೂರು: ಮಹಾದಾಯಿ ನೀರು ಹಂಚಿಕೆಯ ಐತೀರ್ಪಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ನ್ಯಾಯಾಧಿಕರಣ ನೀಡಿರುವ ನೀರಿನ ಸಮರ್ಥ ಬಳಕೆಗೆ ಮುಂದಿನ ಬಜೆಟ್ ನಲ್ಲಿ ಸೂಕ್ತ ಅನುದಾನ ಮೀಸಲಿರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದರು. ಅಲ್ಲದೆ ಹುಬ್ಬಳ್ಳಿ-ಧಾರವಾಡ ಪ್ರದೇಶದ ಜನರ ಅಗತ್ಯತೆಗಳನ್ನು ಪೂರೈಸಲು ಹೆಚ್ಚುವರಿ ನೀರು ಬಿಡುಗಡೆಗೆ ನೆರವಾಗುತ್ತದೆ ಎಂದರು. 

ಕರ್ನಾಟಕಕ್ಕೆ ಮಂಜೂರು ಮಾಡಿರುವ 13.5 ಟಿಎಂಸಿ ನೀರಿನ ಸದ್ಬಳಕೆಗೆ ಬಜೆಟ್ ನಲ್ಲಿ ಸೂಕ್ತ ಅನುದಾನ ಮೀಸಲಿರಿಸುವುದಾಗಿ ಸಿಎಂ ತಿಳಿಸಿದರು. 

ಮಹಾದಯಿ ನೀರು ಹಂಚಿಕೆ ನ್ಯಾಯಾಧಿಕರಣದ ತೀರ್ಪಿನ ಕುರಿತು ಸುಪ್ರೀಂಕೋರ್ಟ್ ವಿಚಾರಣೆ ನಡೆಸಬೇಕಿದೆ. ಸದ್ಯ ನ್ಯಾಯಾಧಿಕರಣ ಕರ್ನಾಟಕಕ್ಕೆ 13.45 ಟಿಎಂಸಿ ನೀರು ಬಿಡುವಂತೆ ಸೂಚನೆ ನೀಡಿದೆ. ಇದನ್ನು ಗೋವಾ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದೆ.

SCROLL FOR NEXT