ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಲಬುರಗಿ: ಮಾಜಿ ಸಚಿವರ ಅಣ್ಣನ ಮಗನನ್ನು ಕೊಚ್ಚಿ ಕೊಲೆಗೈದ ಹಂತಕರು

ಮಾಜಿ ಸಚಿವ ಸಿ. ಗುರುನಾಥ ಅವರ ಅಣ್ಣನ ಮಗ ಸತೀಶ ಕಂಬಾನೋರ (42) ರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ಶಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

ಸಾಂದರ್ಭಿಕ ಚಿತ್ರ
Nagaraja AB
Updated On : 29 Feb 2020, 12:16 pm

ಕಲಬುರಗಿ: ಮಾಜಿ ಸಚಿವ ಸಿ. ಗುರುನಾಥ ಅವರ ಅಣ್ಣನ ಮಗ ಸತೀಶ ಕಂಬಾನೋರ (42) ರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ಶಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

ಇಲ್ಲಿನ ಶಂಕರವಾಡಿ ರಘೋಜಿ ಫ್ಯಾಕ್ಟರಿ ಬಳಿ ಮೃತದೇಹ ಪತ್ತೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಕೆಲವು ದಿನಗಳ ಹಿಂದೆ ಇವರ ಕಿರಿಯ ಸಹೋದರ ಶಹಾಬಾದ ನಗರ ಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೋರ ಅವರ ಮೇಲೆಯೂ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಕೊಲೆಗೆ ಹಳೆಯ ದ್ವೇಷವೇ ಕಾರಣ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಶಹಬಾದ್ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Advertisement

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement