ಸಂಗ್ರಹ ಚಿತ್ರ 
ರಾಜ್ಯ

ಜಮೀನಿನಲ್ಲಿ ಟ್ರ್ಯಾಕ್ಟರ್ ಹಾದು ಹೋಗಿದ್ದಕ್ಕೆ ಬಿತ್ತು ಹೆಣ

ಕ್ಷುಲ್ಲಕ ಕಾರಣಕ್ಕೆ ರೈತರ ನಡುವೆ ಹಲವಾರು ದಿನಗಳಿಂದ ಎದ್ದಿದ್ದ ತಕರಾರು ಓರ್ವನ ಕೊಲೆಯೊಂದಿಗೆ ಅಂತ್ಯಗೊಂಡಿದೆ. ಸದ್ಯ ಕೊಲೆ ಆರೋಪಿಯನ್ನು ವಶಕ್ಕೆ ಪಡೆದು ಚಾಮರಾಜನಗರ ಗ್ರಾಮಾಂತರ ಪಿಎಸ್ಐ ಲೋಹಿತ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕೆ ರೈತರ ನಡುವೆ ಹಲವಾರು ದಿನಗಳಿಂದ ಎದ್ದಿದ್ದ ತಕರಾರು ಓರ್ವನ ಕೊಲೆಯೊಂದಿಗೆ ಅಂತ್ಯಗೊಂಡಿದೆ. ಸದ್ಯ ಕೊಲೆ ಆರೋಪಿಯನ್ನು ವಶಕ್ಕೆ ಪಡೆದು ಚಾಮರಾಜನಗರ ಗ್ರಾಮಾಂತರ ಪಿಎಸ್ಐ ಲೋಹಿತ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ.ಕೊತ್ತಲವಾಡಿ ಗ್ರಾಮದ ಪುಟ್ಟಸ್ವಾಮಯ್ಯ (65) ಕೊಲೆಯಾದ ದುರ್ದೈವಿ. ಅದೇ ಗ್ರಾಮದ ಸ್ವಾಮಿ (55) ಎಂಬಾತ ಪುಟ್ಟಸ್ವಾಮಯ್ಯರ ಜಮೀನಿನಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ್ದರಿಂದ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. 

ಕುಪಿತಗೊಂಡಿದ್ದ ಸ್ವಾಮಿ ಕಲ್ಲಿನಲ್ಲಿ ಹಲ್ಲೆ ನಡೆಸಿದ್ದರಿಂದ ಪುಟ್ಟಸ್ವಾಮಯ್ಯರ ಎದೆಮೂಳೆಗಳು ಮುರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಇವರಿಬ್ಬರೂ ಅಕ್ಕಪಕ್ಕದ ಜಮೀನಿನವರಾಗಿದ್ದಾರೆ. ಅಳತೆ ವಿಚಾರವಾಗಿ ಹಲವಾರು ದಿನಗಳಿಂದ ತಕರಾರು ಎದ್ದಿತ್ತು ಎಂದು ತಿಳಿದು ಬಂದಿದೆ. ಸದ್ಯ ಆರೋಪಿ ಸ್ವಾಮಿಯನ್ನು ವಶಕ್ಕೆ ಪಡೆದು ಚಾಮರಾಜನಗರ ಗ್ರಾಮಾಂತರ ಪಿಎಸ್ಐ ಲೋಹಿತ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!