ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಆಕಸ್ಮಿಕ ಬೆಂಕಿ ಅವಘಡ; ಒಂದೇ ಕುಟುಂಬದ ಮೂವರು ಸಜೀವ ದಹನ

ಇದ್ದಕ್ಕಿದ್ದಂತೆ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಿಸಿರುವ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಚಿತ್ರದುರ್ಗ: ಇದ್ದಕ್ಕಿದ್ದಂತೆ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಿಸಿರುವ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಚಿತ್ರದುರ್ಗ ನಗರದ ಗಾರೆಹಟ್ಟಿಯಲ್ಲಿ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಸುಟ್ಟು ಭಸ್ಮವಾಗಿದ್ದಾರೆ.  ಅರುಣ್ ಕುಮಾರ್ (43), ಪತ್ನಿ ಲತಾ (35), ಮಗಳು ಅಮೃತಾ (13) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಅಕ್ಕಪಕ್ಕದವರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ.

ಘಟನೆಗೆ ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ. ಮನೆಯಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ನೆರೆಹೊರೆಯವರಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದು ಈ ದುರ್ಘಟನೆ ಸಂಭವಿಸಿದೆಯೋ ಅಥವಾ ಉದ್ದೇಶಪೂರ್ವಕವಾಗಿ ನಡೆದ ಘಟನೆಯೋ ಎಂಬುದು ತನಿಖೆ ನಂತರ ಬೆಳಕಿಗೆ ಬರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್