ರಾಜ್ಯ

ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

Srinivas Rao BV

ಬೆಂಗಳೂರು: ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು(ಆಶಾ) ಶುಕ್ರವಾರದಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದ್ದಾರೆ. 

ಮಾಸಿಕ ಗೌರವಧನವನ್ನು 12,000 ರೂ.ಗೆ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರುವ ಪ್ರತಿಭಟನೆ ನಡೆಸುತ್ತಿದ್ದಾರೆ. 
ರಾಜ್ಯಾದ ಎಲ್ಲೆಡೆಯಿಂದ ಆಗಮಿಸಿದ್ದ ಕಾರ್ಯಕರ್ತೆಯರು ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ ಮೆರವಣಿಗೆ ನಡೆಸಿದರು. 

ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ತಮ್ಮ ಬೇಡಿಕೆಗಳ ಕುರಿತು ಸರ್ಕಾರದ ಸ್ಪಂದನೆಗೆ ಅತೃಪ್ತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಒಕ್ಕೂಟದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಹೇಳಿದ್ದಾರೆ. ‘ಆರೋಗ್ಯ ಸಚಿವರೊಂದಿಗೆ ನಾಲ್ಕನೇ ಭೇಟಿ ಇದಾಗಿದ್ದು, ಸರ್ಕಾರದಿಂದ ಸುಳ್ಳು ಭರವಸೆಗಳೇ ದೊರೆಯುತ್ತಿವೆ. 

ಬೆಂಗಳೂರಿನಲ್ಲಿ ನಾವು ಅಹೋರಾತ್ರಿ ಧರಣಿ ನಡೆಸುತ್ತೇವೆ. ಬೇಡಿಕೆಗಳು ಈಡೇರುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆ.’ ಎಂದು ನಾಗಲಕ್ಷ್ಮಿ ಹೇಳಿದ್ದಾರೆ.
ಭಾರೀ ಪ್ರತಿಭಟನಾ ಮೆರವಣಿಗೆಯಿಂದ ಮೆಜೆಸ್ಟಿಕ್ ಸುತ್ತಮುತ್ತ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿತ್ತು.
 

SCROLL FOR NEXT