ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬಾಗಲಕೋಟೆ: ಸಾರಿಗೆ ಸಂಸ್ಥೆ ಬಸ್-ಕಾರು ಮುಖಾಮುಖಿ; ಸ್ಥಳದಲ್ಲಿಯೇ ನಾಲ್ವರು ಸಾವು

ಓವರ್ ಟೇಕ್ ಮಾಡುವ ಭರದಲ್ಲಿ ಕೆಎಸ್​ಆರ್​ಟಿಸಿ ಬಸ್ಸೊಂದು, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮುಧೋಳ ತಾಲೂಕಿನ ಶಿರೋಳ ಗ್ರಾಮದ ಬಳಿ ನಡೆದಿದೆ.

ಸಾಂದರ್ಭಿಕ ಚಿತ್ರ
Shilpa D
Updated On : 4 Jan 2020, 6:35 pm

ಬಾಗಲಕೋಟೆ: ಓವರ್ ಟೇಕ್ ಮಾಡುವ ಭರದಲ್ಲಿ ಕೆಎಸ್​ಆರ್​ಟಿಸಿ ಬಸ್ಸೊಂದು, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮುಧೋಳ ತಾಲೂಕಿನ ಶಿರೋಳ ಗ್ರಾಮದ ಬಳಿ ನಡೆದಿದೆ.

ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ ವಾಯವ್ಯ ಕರ್ನಾಟಕ ರಸ್ತೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಖಂಡಿ ತಾಲ್ಲೂಕಿನ ಗೋಠೆ ಹಾಗೂ ಕಾಜಿ ಬೀಳಗಿ ಗ್ರಾಮದ ಹಣಮಂತ (21), ರಿಯಾಜ್ (25), ಬಾಲಪ್ಪ (34) ಹಾಗೂ ಸಿದ್ದರಾಯ (34) ಮೃತಪಟ್ಟವರು. ಎಲ್ಲರೂ ಕಾಜಿ ಬೀಳಗಿಯಿಂದ ಧಾರವಾಡಕ್ಕೆ ಹೊರಟಿದ್ದರು. ಬಸ್ ಬೆಳಗಾವಿಯಿಂದ ಮುಧೋಳ ಮಾರ್ಗವಾಗಿ ಕಲಬುರ್ಗಿಗೆ ಹೊರಟಿತ್ತು.

Advertisement

Advertisement

ಕಬ್ಬು ಸಾಗಣೆ ಟ್ರ್ಯಾಕ್ಟರ್ ಹಿಂದಿಕ್ಕುವ ಭರದಲ್ಲಿ ಬಸ್ಸು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿತ್ತು. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement