ಬೆಂಗಳೂರಿನಲ್ಲಿಂದು ಎನ್ಆರ್ಸಿ ವಿರೋಧಿಸಿ ಪ್ರತಿಭಟನೆ; ಆಶಾ ಕಾರ್ಯಕರ್ತೆಯರ ಧರಣಿ
ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ನೇತೃತ್ವದಲ್ಲಿ ನಗರದಲ್ಲಿಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಸಂದರ್ಭದಲ್ಲಿ ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ನೇತೃತ್ವದಲ್ಲಿ ನಗರದಲ್ಲಿಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು ಮಧ್ನಾಹ್ನ 2ರಿಂದ ಸಂಜೆ 6 ಗಂಟೆವರೆಗೆ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಧಾರ್ಮಿಕ ಮುಖಂಡರು, ಪ್ರಗತಿಪರ ಚಿಂತಕರು ಸೇರಿ ಒಟ್ಟು 50 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ .
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.