ರಾಜ್ಯ

ಜನಪ್ರತಿನಿಧಿಗಳು ಖಾಸಗಿ ವಾಹನಗಳಲ್ಲಿ ನಾಮಫಲಕ ಲಗತ್ತಿಸುವಂತಿಲ್ಲ: ಹೈಕೋರ್ಟ್

Shilpa D

ಬೆಂಗಳೂರು: ಜನಪ್ರತಿನಿಧಿಗಳು ಸರ್ಕಾರೇತರ ವಾಹನಗಳಲ್ಲಿ ತಮ್ಮ ಹುದ್ದೆ, ಸರ್ಕಾರಿ ಲಾಂಛನ, ಚಿಹ್ನೆ ಮತ್ತಿತರರ ಮಾಹಿತಿಗಳನ್ನು ಒಳಗೊಂಡ ನಾಮಫಲಕ ಅಳವಡಿಸುವುದು ಕಾನೂನುಬಾಹಿರ ಎಂದು ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. 

ಇಂತಹ ಫಲಕಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡು ಜ.22ರೊಳಗೆ ವರದಿ ಸಲ್ಲಿಸಬೇಕು ಎಂದು ಅಡ್ವೊಕೇಟ್ ಜನರಲ್ ಅವರಿಗೆ ನಿರ್ದೇಶನ ನೀಡಿದೆ.

ಪ್ರಕರಣವೊಂದರ ವಿಚಾರಣೆ ವೇಳೆ ಈ ಸಂಬಂಧ ಆದೇಶ ನೀಡಿರುವ ನ್ಯಾಯಮೂರ್ತಿ ಆರ್.ದೇವದಾಸ್‌ ಅವರಿದ್ದ ಏಕಸದಸ್ಯ ಪೀಠ, ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಯಾರೂ ತಮ್ಮ ಖಾಸಗಿ ವಾಹನಗಳ ಮೇಲೆ ಯಾವುದೇ ರೀತಿಯ ನಾಮಫಲಕ ಅಳವಡಿಸಬಾರದು. ಇದು ಮಾಜಿ ಮತ್ತು ಹಾಲಿ ಜನಪ್ರತಿನಿಧಿಗಳಿಗೆ ಅನ್ವಯಿಸುತ್ತದೆ ಎಂದಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳು, ಅರೆ ನ್ಯಾಯಿಕ ಸಂಸ್ಥೆಗಳ ಹೆಸರು, ಲಾಂಛನ-ಚಿಹ್ನೆಗಳನ್ನು ಹೋಲುವಂತಹ ಫಲಕಗಳನ್ನು ಖಾಸಗಿ ಸಂಘಟನೆ, ಸಂಘ-ಸಂಸ್ಥೆ, ಕಂಪನಿಗಳ ವಾಹನಗಳ ಮೇಲೆ ಅಳವಡಿಸಬಾರದು. ಈ ನಿಯಮ ಉಲ್ಲಂಘಿಸಿದ ವಾಹನಗಳ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.

SCROLL FOR NEXT