ಸಾಂದರ್ಭಿಕ ಚಿತ್ರ 
ರಾಜ್ಯ

ನಿಲ್ಲದ ಪೌರತ್ವದ ಕಿಚ್ಚು: ಬೆಂಗಳೂರಿನ 6 ಕಡೆಗಳಲ್ಲಿ ಇಂದು ಪ್ರತಿಭಟನೆ 

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು, ಎಡಪಂಥೀಯ ಸಂಘಟನೆಗಳಿಂದ ಬೆಂಗಳೂರು ನಗರದಲ್ಲಿ ಶನಿವಾರ ಕೂಡ ಪ್ರತಿಭಟನೆ ಮುಂದುವರಿದಿದೆ.

ಬೆಂಗಳೂರು: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು, ಎಡಪಂಥೀಯ ಸಂಘಟನೆಗಳಿಂದ ಬೆಂಗಳೂರು ನಗರದಲ್ಲಿ ಶನಿವಾರ ಕೂಡ ಪ್ರತಿಭಟನೆ ಮುಂದುವರಿದಿದೆ.


ಇಂದು ಬೆಳಗ್ಗೆ 7 ಗಂಟೆಯಿಂದ 7.30ರವರೆಗೆ ನಗರದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಯಿತು. ಇಂದು ಸಂಜೆ 4 ಗಂಟೆಗೆ ಟೌನ್ ಹಾನ್ ಮುಂಭಾಗ ನಡೆಯಲಿದೆ. ಬನ್ನೇರುಘಟ್ಟದ ಈದ್ಗಾ ಮೈದಾನ  ಸೇರಿದಂತೆ 6 ಕಡೆಗಳಲ್ಲಿ ಇಂದು ದಿನವಿಡೀ ಪ್ರತಿಭಟನೆ ನಡೆಯಲಿದೆ.


ನಗರದಲ್ಲಿ 6 ಕಡೆ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯವಾದರೂ ಕೂಡ ಇಂದು ಕೂಡ ಬೆಂಗಳೂರಿಗರಿಗೆ ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ.

ನಿನ್ನೆ ವಿವಿಧ ಬೇಡಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಒಂದೆಡೆಯಾದರೇ, ಇನ್ನೊಂದೆಡೆ ಚಾಮರಾಜ ಪೇಟೆಯ‌ ಈದ್ಗಾ ಮೈದಾನದಲ್ಲಿ ನಡೆದ ಸಿಎಎ ಪ್ರತಿಭಟನೆಯಿಂದಾಗಿ ಟ್ರಾಫಿಕ್ ಸಮಸ್ಯೆ ಉಂಟಾಗಿ ಜನ ಹಲವು ಕಡೆಗಳಲ್ಲಿ ಕಿರಿಕಿರಿ ಅನುಭವಿಸಿದ್ದರು. ಇಂದು ಕೂಡ ಮೆಜೆಸ್ಟಿಕ್, ಟೌನ್ ಹಾಲ್, ಹೆಬ್ಬಾಳ, ಆರ್.ಟಿ ನಗರ, ಹೊಸೂರು ಸುತ್ತಮುತ್ತ ಟ್ರಾಫಿಕ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ