ಬೆಂಗಳೂರು: ರಾಜ್ಯದ ಭತ್ತ ಬೆಳೆಗಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಹೊರಬಿದ್ದಿದ್ದು, ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ರೂ. ಬೆಂಬಲ ಬೆಲೆ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ.
ಭತ್ತಕ್ಕೆ ಬೆಂಬಲ ಬೆಲೆ ನಿಗಧಿ ಮಾಡುವ ವಿಚಾರ ಸಂಬಂಧ ರಾಯಚೂರು, ಬಳ್ಳಾರಿ, ಕೊಪ್ಪಳ ಭಾಗದ ಜನಪ್ರತಿ ನಿಧಿಗಳು ಹಾಗೂ ರೈತ ಮುಖಂಡರ ನಿಯೋಗ ಸಿಎಂ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿತು.
ಸಚಿವ ಬಿ.ಶ್ರೀರಾಮುಲು,ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕ ವೆಂಕಟ ರಾವ್ ನಾಡಗೌಡ ನೇತೃತ್ವದಲ್ಲಿ ಭೇಟಿ ನೀಡಿ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿತು. ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಅವರು ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ಬೆಂಬಲ ಬೆಲೆ ಘೋಷಿಸಿದ್ದಾರೆ.
ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಾಗಿ ಭತ್ತ ಬೆಳೆಯುತ್ತಾರೆ. ಇದೀಗ ಭತ್ತ ಕಟಾವ್ ಮಾಡಲಾಗಿದ್ದು ಸೂಕ್ತ ಬೆಲೆ ಸಿಗದೆ ತಲೆ ಮೇಲೆ ಕೈಹೊತ್ತು ಕುಳಿತ್ತಿದ್ದ ರೈತರ ಈಗ ಸ್ವಲ್ಪ ನಿರಾಳರಾಗಿದ್ದಾರೆ.