ಸಾಂದರ್ಭಿಕ ಚಿತ್ರ 
ರಾಜ್ಯ

ಬಂಟ್ವಾಳ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸಿಬ್ಬಂದಿ ಬಂಧನ

ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಕಾಲೇಜಿನ ಬೋಧಕೇತರ ಸಿಬ್ಬಂದಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು;  ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಕಾಲೇಜಿನ ಬೋಧಕೇತರ ಸಿಬ್ಬಂದಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಕಾಲೇಜಿನಲ್ಲಿ ಗುತ್ತಿಗೆಯಾಧಾರದಲ್ಲಿ ಕೂಲಿ ಕೆಲಸ ನಿರ್ವಹಿಸುವ ಉಜಿರೆಯ ರೋಹಿತ್  ಎಂಬಾತನನ್ನು ಪ್ರಕರಣ ಸಂಬಂಧಿಸಿ  ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಪ್ರತಿದಿನ ಕಾಲೇಜಿನ ಮೆಟ್ಟಲಿನಲ್ಲಿ ನಿಂತು ವಿದ್ಯಾರ್ಥಿನಿಯರಿಗೆ ಚುಡಾಯಿಸುತ್ತಿದ್ದ ಎಂದು ಹೇಳಲಾಗಿದೆ.

ಶನಿವಾರವು ವಿದ್ಯಾರ್ಥಿನಿಯೊಬ್ಬಳ ಮೈಮೇಲೆ ಕೈಹಾಕಿ ಲೈಂಗಿಕ ಕಿರುಕುಳ ನೀಡಲೆತ್ನಿಸಿದಾಗ ಅಲ್ಲಿದ್ದ ವಿದ್ಯಾರ್ಥಿನಿಯರೆಲ್ಲರು ಜಮಾಯಿಸಿ ಈತನಿಗೆ ಥಳಿಸಲು ಮುಂದಾದಾಗ ಅಲ್ಲಿದ್ದ ಕಾಲೇಜಿನ ಸಿಬ್ಬಂದಿ ಮಧ್ಯ ಪ್ರವೇಶಿಸಿದರೆನ್ನಲಾಗಿದೆ.

ಈ ಸಂದರ್ಭ ರೋಹಿತ್ ನ ಅಸಭ್ಯ ವರ್ತನೆಯಿಂದ ಆಕ್ರೋಶಿತರಾದ ವಿದ್ಯಾರ್ಥಿನಿಯರು ಪೊಲೀಸ್ ಠಾಣೆಗೆ ತೆರಳಿದ ಆತನ ವಿರುದ್ಧ ದೂರು ದಾಖಲಿಸಿದಲ್ಲದೆ ಬಂಧನಕ್ಕೂ ಪಟ್ಟು ಹಿಡಿದು ಕುಳಿತ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ರೋಹಿತ್ ನನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video