ಯಡಿಯೂರಪ್ಪ 
ರಾಜ್ಯ

ಕೆಆರ್ ಎಸ್ ಸುತ್ತಮುತ್ತ ಗಣಿಗಾರಿಕೆ ಸ್ಥಗಿತಗೊಳಿಸಿ; ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚನೆ

ಮೈಸೂರಿನ ಕೃಷ್ಣ ರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೆಂಗಳೂರು: ಮೈಸೂರಿನ ಕೃಷ್ಣ ರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೆಆರ್​ಎಸ್​ ಡ್ಯಾಮ್​ ಸಮೀಪದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗುತ್ತಿದೆ ಎನ್ನಲಾಗುತ್ತಿದೆ. ಹೀಗಾಗಿ, ಗಣಿಗಾರಿಕೆ ನಿಲ್ಲಿಸುವಂತೆ ಸ್ಥಳೀಯರು ಒತ್ತಡ ಹೇರುತ್ತಿದ್ದಾರೆ. ಈ ವಿಚಾರವಾಗಿ ಭಾರೀ ಪ್ರತಿಭಟನೆಗಳು ಕೂಡ ನಡೆದಿವೆ. ಆದರೆ, ಗಣಿಗಾರಿಕೆ ನಿಲ್ಲುವ ಯಾವುದೇ ಲಕ್ಷಣ ಗೋಚರವಾಗುತ್ತಿಲ್ಲ.

ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗುತ್ತಿದೆ. ಹೀಗಾಗಿ ಈ ಪರಿಸರದಲ್ಲಿ ಕೂಡಲೇ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ಸಲ್ಲಿಸುವಂತೆ ಯಡಿಯೂರಪ್ಪ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿದರು.

ಈ ಮೊದಲು ಕೂಡ ಗಣಿಗಾರಿಕೆ ನಿಲ್ಲಿಸುವಂತೆ ಸಾಕಷ್ಟು ಆದೇಶಗಳನ್ನು ಸರ್ಕಾರ ಹೊರಡಿಸಿದೆ. ಆದಾಗ್ಯೂ, ಈ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡಿರಲಿಲ್ಲ. ಈಗ, ಮುಖ್ಯಮಂತ್ರಿಗಳೇ ಈ ಆದೇಶ ಹೊರಡಿಸಿದ್ದು, ಇನ್ನಾದರೂ ಗಣಿಗಾರಿಕೆ ನಿಲ್ಲಲಿದೆಯೇ ಎನ್ನುವ ಪ್ರಶ್ನೆ ಕಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್