ಶೋಭಾ ಕರಂದ್ಲಾಜೆ 
ರಾಜ್ಯ

ಯುವತಿ ಮೇಲೆ ಅತ್ಯಾಚಾರ, ಮತಾಂತರಕ್ಕೆ ಯತ್ನ: ಆರೋಪಿಗಳ ವಿರುದ್ಧ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ

ರಾಜ್ಯದಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡುತ್ತಿದ್ದು, ಯುವತಿ ಮೇಲೆ ಬರೋಬ್ಬರಿ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಮಾಡಿರುವ ಕಾಮುಕರು, ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಒತ್ತಡ ಹೇರುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಲುವಂತೆ ಸಂಸದೆ ಶೋಭಾ ಕರಂದ್ಲಾಜೆಯವರು ಆಗ್ರಹಿಸಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡುತ್ತಿದ್ದು, ಯುವತಿ ಮೇಲೆ ಬರೋಬ್ಬರಿ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಮಾಡಿರುವ ಕಾಮುಕರು, ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಒತ್ತಡ ಹೇರುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದೆ ಶೋಭಾ ಕರಂದ್ಲಾಜೆಯವರು ಆಗ್ರಹಿಸಿದ್ದಾರೆ. 

ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂತ್ರಸ್ತೆ ಯುವತಿಯ ಜೊತೆಗೆ ಭೇಟಿ ಮಾಡಿರುವ ಶೋಬಾ ಕರಂದ್ಲಾಜೆಯವರು ಘಟನೆಯ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಅಲ್ಲದೆ, ಪ್ರಕರಣದ ಕುರಿತಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ದೂರು ನೀಡಿದ್ದಾರೆ. 

ಕೇರಳದ ರಾಜ್ಯದ ಕಾಸರಗೋಡು ಜಿಲ್ಲೆಯ ಯುವತಿಯೊಬ್ಬಳನ್ನು ಬೆಂಗಳೂರಿನಲ್ಲಿ ಇರುವ ಇಬ್ಬರು ಮುಸ್ಲಿಂ ಯುವಕರು ಪ್ರೀತಿಯ ಹೆಸರಿನಲ್ಲಿ ಕರೆದೊಯ್ದು ತಂಪು ಪಾನೀಯದಲ್ಲಿ ಮತ್ತುಬರಿಸುವ ಔಷದಿ ಹಾಕಿ ಅತ್ಯಾಚಾರ ಮಾಡಿದ್ದಾರೆ. ಅಲ್ಲದೆ, ಘಟನೆಯ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ಇದನ್ನು ಬಳಸಿಕೊಂಡು ಯುವತಿಗೆ ಬೆದರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇರಿದ್ದಾರೆಂದು ಶೋಭಾ ಅವರು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್