ಪಾರ್ಲರ್ ಮೇಲೆ ಸಿಸಿಬಿ ದಾಳಿ: ಇಬ್ಬರ ಬಂಧನ
ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, ಆರು ಯುವತಿಯರನ್ನು ರಕ್ಷಿಸಿದ್ದಾರೆ. ಹಿಮಾಚಲ ಪ್ರದೇಶ ಮೂಲದ ಸಾಮ್ರಾಟ್ ಠಾಕೂರ್ (25), ರಾಕೇಶ್ (22) ಬಂಧಿತ ಆರೋಪಿಗಳು.
ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, ಆರು ಯುವತಿಯರನ್ನು ರಕ್ಷಿಸಿದ್ದಾರೆ. ಹಿಮಾಚಲ ಪ್ರದೇಶ ಮೂಲದ ಸಾಮ್ರಾಟ್ ಠಾಕೂರ್ (25), ರಾಕೇಶ್ (22) ಬಂಧಿತ ಆರೋಪಿಗಳು.
ಬಂಧಿತರಿಂದ 13,500 ನಗದು ಹಾಗೂ 2 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿವೇಕ್ ನಗರದ ಇಕೋ ಬಾಡಿ ಸ್ಪಾ ಆ್ಯಂಡ್ ಸಲೂನ್ ಎಂಬ ಹೆಸರಿನಲ್ಲಿ ಸ್ಪಾ ನಡೆಸುವುದಾಗಿ ಹೇಳಿ, ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ರವಿವಾರ ದಾಳಿ ನಡೆಸಿದ್ದರು.
ದಾಳಿ ಸಂದರ್ಭದಲ್ಲಿ ಆರು ಯುವತಿಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೇಶ್ಯಾವಾಟಿಕೆ ದಂಧೆಯಿಂದ ಗಳಿಸಿದ ಹಣದಿಂದ ಆರೋಪಿಗಳು ಜೀವನಸಾಗಿಸತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಮಾದಕದ್ರವ್ಯ ನಿಗ್ರಹ ದಳದ ಪೊಲೀಸ್ ಇನ್ಸ್ ಪೆಕ್ಟರ್ ಲಕ್ಷ್ಮಿ ಕಾಂತಯ್ಯ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.