ಮಲ್ಲೇಶಯ್ಯ 
ರಾಜ್ಯ

ಬೆಂಗಳೂರು: ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ, ಚಿಕಿತ್ಸೆ ಫಲಿಸದೆ ಎಎಸ್ಐ ಸಾವು

ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯಕ್ಕೆ ಹಾಜರಾಗಲು ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ರೊಬ್ಬರು ಮೃತಪಟ್ಟಿರುವ ದುರ್ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.

ಬೆಂಗಳೂರು: ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯಕ್ಕೆ ಹಾಜರಾಗಲು ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ರೊಬ್ಬರು ಮೃತಪಟ್ಟಿರುವ ದುರ್ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.

ಚನ್ನಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ಆಗಿದ್ದ ಮಲ್ಲೇಶಯ್ಯ ಮೃತಪಟ್ಟವರು.

ಕಳೆದ ಶುಕ್ರವಾರ ರಾತ್ರಿ ಕರ್ತವ್ಯಕ್ಕಾಗಿ ಠಾಣೆಗೆ ತಮ್ಮ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಲ್ಲೇಶಯ್ಯ ಅವರು ಮಂಗಳವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಚಾಲಕನನ್ನು ಬಂಧಿಸಿ ತನಿಖೆ‌ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!