ರಾಜ್ಯ

ನಾಳೆ ಭಾರತ್ ಬಂದ್: ರಾಜ್ಯಕ್ಕೂ ತಟ್ಟುತ್ತಾ ಬಂದ್ ಬಿಸಿ? ಶಾಲೆಗಳಿಗೆ ರಜೆ ಅನುಮಾನ

Manjula VN

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ಕಾನೂನುಗಳ ವಿರುದ್ಧ ಕೇಂದ್ರ ಕಾರ್ಮಿಕ ಸಂಘಟನೆಗಳು ಬುಧವಾರದಂದು ಕರೆ ನೀಡಿರುವ ದೇಶವ್ಯಾಪ್ತಿ ಮುಷ್ಕರಕ್ಕೆ ರಾಜ್ಯದ ಬಹುತೇಕ ಕಾರ್ಮಿಕ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳು ನೈತಿಕ ಬೆಂಬಲ ಸೂಚಿವೆ. ಆದರೆ, ತಮ್ಮ ಸೇವೆ ಸ್ಥಗಿತಗೊಳಿಸುವ ಸೂಚನೆಗಳನ್ನು ನೀಡಿಲ್ಲ. ಹೀಗಾಗಿ ಭಾರತ್ ಬಂದ್ ಜನಜೀವನದ ಮೇಲೆ ಬಿಸಿ ತಟ್ಟುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. 

ಕೆಎಸ್ಆರ್'ಟಿಸಿ, ಬಿಎಂಟಿಸಿ ಸೇರಿದಂತೆ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳು ಈ ಮುಷ್ಕರಕ್ಕೆ ಬೆಂಬಲ ಸೂಚಿಸಿವ. ಆದರೆ, ಬಸ್ ಸೇವಯಲ್ಲಿ ವ್ಯಕ್ತವಾಗಯದಂತೆ ಧರಣಿ ನಡೆಸಲು ತೀರ್ಮಾನಿಸಿವೆ. 

ಇನ್ನು ಮೆಟ್ರೋ ರೈಲು, ಮೊಬೈಲ್ ಆ್ಯಪ್ ಆಧಾರಿತ ಓಲಾ, ಉಬರ್ ಹಾಗೂ ಪ್ರವಾಸಿ ವಾಹನ, ಸರಕು ಸಾಗಣೆ ಲಾರಿ ಮಾಲೀಕರ ಸಂಘಟನೆಗಳು ಮುಷ್ಕರಕ್ಕೆ ಬಾಹ್ಯ ಬೆಂಬಲ ಘೋಷಿಸಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೇವೆ ಮುಂದುವರೆಸಲು ನಿರ್ಧರಿಸಿವೆ. 

ರಾಝಾದನಿ ಬೆಂಗಳೂರಿನಲ್ಲಿ ಈ ಮುಷ್ಕರಕ್ಕೆ ಆಟೋ ರಿಕ್ಷಾ ಚಾಲಕರ ಸಂಘಟನೆಗಳ ಪೈಕಿ ಕೆಲ ಸಂಘಟನೆಗಲು ಬೆಂಬಲ ಸೂಚಿಸಿ ಸೇವೆ ಸ್ಥಗಿತಗೊಳಿಸಲು ತೀರ್ಮಾನಿಸಿವೆ. ಇನ್ನೂ ಕೆಲವು ಸಂಘಟನೆಗಳು ಕೇವಲ ನೈತಿಕ ಬೆಂಬಲ ಸೂಚಿಸಿ, ಸೇವೆ ಮುಂದುವರೆಸಲು ನಿರ್ಧರಿಸಿವೆ. ಹಾಗಾಗಿ ಬುಧವಾರ ಆಟೋ ಸೇವೆಯಲ್ಲಿ ಕೊಂಚ ವ್ಯತ್ಯಯವಾಗುವ ಸಾಧ್ಯತೆಗಳಿವೆ. ಅಂತೆಯೇ ಸಿಐಟಿಯು, ಎಐಟಿಯುಸಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಲು ಬೆಂಗಳೂರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ, ರ್ಯಾಲಿ ಹಮ್ಮಿಕೊಂಡಿವೆ. ಈ ಧರಣಿ ರ್ಯಾಲಿಯಲ್ಲಿ ಗಾರ್ಮೆಂಟ್, ಕಟ್ಟಡ, ಕಾರ್ಮಿಕರು, ಕಾರ್ಖಾನೆಗಳ ನೌಕರರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರು ಸಮಾವೇಶಗೊಳ್ಳುವ ಸಾಧ್ಯತೆಗಳಿವೆ. 

ಭಾರತ್ ಬಂದ್ ಕುರಿತು ಕಾಸಗಿ ಅನುದಾನರಹಿತ ಶಾಲೆಗಳು ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ. ಮಕ್ಕಳು ಹಾಗೂ ಶಿಕ್ಷಕರ ಸುರಕ್ಷತಾ ದೃಷ್ಟಿಯಿಂದ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಖಾಸಗಿ ಶಾಲಾ ಮಂಡಳಿಗಳು ಬದ್ಧವಾಗಿರಲಿವೆ. ಶಾಲೆಗಳಿಗೆ ರಜೆ ಘೋಷಿಸುವುದು ಅಥವಾ ಘೋಷಿಸದೇ ಇರುವುದು ಸರ್ಕಾರವೇ ನಿರ್ಧರಿಸಬೇಕು. ಒಂದು ವೇಳೆ ಸ್ಥಳೀಯವಾಗಿ ಪರಿಸ್ಥಿತಿ ಬಿಗಡಾಯಿಸಿದರೆ, ಆಯಾ ಶಿಕ್ಷಣ ಸಂಸ್ಥೆಗಳು ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಬಹುದು ಎಂದು ಖಾಸಗಿ ಶಾಲಾ ಮಂಡಳಿಗಳ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ತಿಳಿಸಿದ್ದಾರೆ. 

SCROLL FOR NEXT