ರಾಜ್ಯ

ಎಂ ಎಂ ಹಿಲ್ಸ್ ರಸ್ತೆಯಲ್ಲಿ ವಾಹನ ನಿಲ್ಲಿಸುವವರಿಗೆ ಸ್ಥಳದಲ್ಲೇ ದಂಡ: ಅರಣ್ಯ ಇಲಾಖೆ ಬಿಗಿ ಕ್ರಮ

Sumana Upadhyaya

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವುದರ ಮೂಲಕ ನಿಯಮ ಉಲ್ಲಂಘಿಸುವವರಿಗೆ 2 ಸಾವಿರ ರೂಪಾಯಿ ದಂಡ ವಿಧಿಸುವ ಬಿಗಿ ಕ್ರಮವನ್ನು ಅರಣ್ಯ ಇಲಾಖೆ ತೆಗೆದುಕೊಂಡಿದೆ ಎಂದು ಅರಣ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.


ಎಚ್ಚರಿಕೆಯ ಫಲಕಗಳನ್ನು ಹಾಕಲಾಗಿದ್ದರೂ, ವಾಹನಗಳಲ್ಲಿ ತೆರಳುವ ಜನರು ರಸ್ತೆಯಲ್ಲೇ ವಾಹನ ನಿಲ್ಲಿಸಿ ವನ್ಯ ಜೀವಿಗಳ ಚಿತ್ರಗಳನ್ನು ತೆಗೆಯುವುದು, ಸೆಲ್ಫಿಗಳನ್ನು ತೆಗೆಯುವುದನ್ನು ಮುಂದುವರೆಸುವುದರ ಮೂಲಕ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.


ರಸ್ತೆ ಅಪಘಾತಗಳನ್ನು ತಡೆಯಲು ಮತ್ತು ವನ್ಯಜೀವಿಗಳ ಮೇಲಿನ ದಾಳಿಗಳನ್ನು ತಡೆಯುವ ಪ್ರಯತ್ನವಾಗಿ ಅರಣ್ಯ ಇಲಾಖೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದೆ. ಇದು ಜ 1ರಿಂದ ಜಾರಿಗೆ ಬರಲಿದ್ದು, ಗಸ್ತು ತೀವ್ರಗೊಳಿಸಲಾಗಿದೆ ಎಂದು ಮಲೆ ಮಹದೇಶ್ವರ ಬೆಟ್ಟ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕೊಂಡಲು ತಿಳಿಸಿದ್ದಾರೆ.

SCROLL FOR NEXT