ರಾಜ್ಯ

7ನೇ ತರಗತಿಗೆ ಪಬ್ಲಿಕ್ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ; ಸುರೇಶ್ ಕುಮಾರ್

Raghavendra Adiga

ಬೆಂಗಳೂರು: ಏಳನೇ ತರಗತಿಯ ಪಬ್ಲಿಕ್ ಪರೀಕ್ಷೆ ವಿವಾದಕ್ಕೆ ಕೊನೆಗೂ ತೆರೆ ಎಳೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಯ ಬದಲಿಗೆ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಮೌಲ್ಯಮಾಪನ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿಯೇ ತಯಾರಿಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಇತರ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ. ಆದರೆ, ಇಲ್ಲಿ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ ಎಂದರು.

ಈ ಪರೀಕ್ಷೆಗಳನ್ನು ಎದುರಿಸುವ ಮಕ್ಕಳ ಕಲಿಕಾಮಟ್ಟದ ಬಗ್ಗೆ ಪ್ರಮಾಣಪತ್ರ ನೀಡಲಾಗುತ್ತದೆ. ಇದು ಕೇವಲ ಮಕ್ಕಳ ಕಲಿಕಾ ಸಾಮರ್ಥ್ಯ ಅರಿಯುವ ಉದ್ದೇಶದಿಂದ ನಡೆಸುತ್ತಿರುವ ಪರೀಕ್ಷೆ. ಅರ್ಧ ವರ್ಷದ ಬಳಿಕದ ಪಠ್ಯಕ್ರಮದ ಪ್ರಶ್ನೆಗಳನ್ನು ಮಾತ್ರ ಕಲಿಸಲಾಗುತ್ತದೆ. ಜನರು ಪಬ್ಲಿಕ್ ಪರೀಕ್ಷೆ ಎಂದು ಗಾಬರಿಪಡುವ ಅಗತ್ಯವಿಲ್ಲ ಎಂದು ವಿವರಿಸಿದರು. 

SCROLL FOR NEXT