ರಾಜ್ಯ

ವಾಲ್ಮೀಕಿ ಸಮುದಾಯದ ಬೇಡಿಕೆ ಈಡೇರಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ 

Sumana Upadhyaya

'ಬೆಂಗಳೂರು: ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಬುಡಕಟ್ಟು ಮೀಸಲಾತಿ ಕೋಟಾವನ್ನು ಈಗಿರುವ ಶೇಕಡಾ 3ರಿಂದ ಶೇಕಡಾ 7.5ಕ್ಕೆ ಏರಿಸಬೇಕೆಂಬ ವಾಲ್ಮೀಕ ಸಮುದಾಯದ ನಾಯಕರ ಬೇಡಿಕೆಯನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.


ವಾಲ್ಮೀಕಿ ಸಮುದಾಯದ ಏಳಿಗೆಗೆ ಬಿಜೆಪಿ ಸರ್ಕಾರ ಬದ್ಧವಾಗಿದ್ದು ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿಯಂತೆ ಪರಿಗಣಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಆಯೋಗದ ವರದಿಯನ್ನು ಪರಿಶೀಲಿಸಲು ಎಲ್ಲಾ ಇಲಾಖೆಗಳಿಗೆ 6 ತಿಂಗಳ ಕಾಲಾವಕಾಶವನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ಅವರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. 


ಇತ್ತೀಚೆಗೆ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿ ಅವರು ಆರೋಗ್ಯ ಸಚಿವ ಶ್ರೀರಾಮುಲು, ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ಬಿಜೆಪಿಯ ರಮೇಶ್ ಜಾರಕಿಹೊಳಿ ಅವರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು.


ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಭರವಸೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಆಯೋಗ ವರದಿ ಸಲ್ಲಿಸಿದ ಕೂಡಲೇ ಸರ್ಕಾರ ಅದನ್ನು ಗಮನಿಸಿ ಅಗತ್ಯ ಕ್ರಮ ಕೈಗೊಳ್ಳಲು ತ್ವರಿತ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

SCROLL FOR NEXT