ಸಿ.ಟಿ.ರವಿ 
ರಾಜ್ಯ

ಕಲ್ಕುಳಿ ವಿಠಲ್ ಹೆಗ್ಡೆ ಬದಲು ಸಿದ್ದರಾಮಯ್ಯ ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಲಿ: ಸಿಟಿ ರವಿ

ನಾವು ಮತಪತ್ರಗಳನ್ನು ನಂಬುತ್ತೇವೆ ಹೊರತು ಬುಲೆಟ್‌ಗಳಲ್ಲ, ಆದ್ದರಿಂದ ಮಾಜಿ ನಕ್ಸಲ್ ನಾಯಕರೊಬ್ಬರು ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗುವುದನ್ನು ನಾವು ವಿರೋಧಿಸುತ್ತೇವೆ ಎಂದು ಕನ್ನಡ ಮತ್ತುಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ ಟಿ ರವಿ,ಹೇಳಿದ್ದಾರೆ. 

ಚಿತ್ರದುರ್ಗ: ನಾವು ಮತಪತ್ರಗಳನ್ನು ನಂಬುತ್ತೇವೆ ಹೊರತು ಬುಲೆಟ್‌ಗಳಲ್ಲ, ಆದ್ದರಿಂದ ಮಾಜಿ ನಕ್ಸಲ್ ನಾಯಕರೊಬ್ಬರು ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗುವುದನ್ನು ನಾವು ವಿರೋಧಿಸುತ್ತೇವೆ ಎಂದು ಕನ್ನಡ ಮತ್ತುಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ ಟಿ ರವಿ,ಹೇಳಿದ್ದಾರೆ.

ನಗರದ ಮಾಧ್ಯಮ ಪ್ರತಿನಿಧಿಗಳಿಡನೆ ಮಾತನಾಡಿದ ಸಚಿವರು ಕಲ್ಕುಳಿ ವಿಠಲ್ ಹೆಗ್ಡೆ ಅವರನ್ನು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದನ್ನು ತೀವ್ರವಾಗಿ ವಿರೋಧಿಸಿದರು. ಸಮಾಜದ ಅಭಿವೃದ್ಧಿಗಾಗಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗಿದೆ, ಆದರೆ ಸಮಾಜದಲ್ಲಿ ಬಿರುಕು ಮೂಡಿಸುವವರನ್ನು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಮಾಡಬಾರದು. ನಕ್ಸಲ್ ನಾಯಕರಾಗಿದ್ದವರನ್ನು ಸಮ್ಮೇಳನ ಅಧ್ಯಕ್ಷರನ್ನಾಗಿಸಿರುವುದು ತಪ್ಪು ಎಂದು ಪ್ರತಿಪಾದಿಸಿದರು.

ಸಮ್ಮೇಳನ ಸಂಘಟನೆ ಕುರಿತು ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿರುವ ಕಾರಣ ಜಿಲ್ಲಾಡಳಿತ ಸಮ್ಮೇಳನಕ್ಕೆ ನಿಧಿ ಬಿಡುಗಡೆಯನ್ನು ತಡೆ ಹಿಡಿದಿದೆ.  ನಿಧಿಗಳ ವಿಷಯ ಇನ್ನೂ ಚರ್ಚೆಯಲ್ಲಿದೆ. ಸಮ್ಮೇಳನಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಿದರೆ ಸರ್ಕಾರವು ಯಾವುದೇ ತೊಂದರೆಯಿಲ್ಲದೆ ಹಣವನ್ನು ಬಿಡುಗಡೆ ಮಾಡುತ್ತದೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನದ ದ ಅಧ್ಯಕ್ಷರಾದರೆ ನಾವು ಅದನ್ನು ಭವ್ಯವಾಗಿ ಆಚರಿಸಲು ಸಿದ್ದರಿದ್ದೇವೆ. ಹಾಗೆಯೇ ನಾನು ಸಹ ಮುಂಚೂಣಿಯಲ್ಲಿ ನಿಂತು ಕಾರ್ಯಕ್ರಮವನ್ನು ನಡೆಸಿಕೊಡುವುದಕ್ಕೆ ಸಿದ್ದ. ಆದರೆ ನಕ್ಸಲ್ ಹಿನ್ನೆಲೆ ಇರುವ ಕಲ್ಕುಳಿ ಹೆಗ್ಡೆ ಅಧ್ಯಕ್ಷರಾದರೆ ಇದು ಸಾಧ್ಯವಿಲ್ಲ ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ  ಜನವರಿ 10 ಮತ್ತು 11 ರಂದು ಶೃಂಗೇರಿಯ ಆದಿ ಚುಂಚನಗಿರಿ ಸಮುದ್ರಯಾನ ಭವನದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!