ಹೈಕೋರ್ಟ್ 
ರಾಜ್ಯ

ಎಚ್.ಡಿಕೆ- ಡಿ.ಸಿ.ತಮ್ಮಣ್ಣ ವಿರುದ್ಧ ಭೂ ಕಬಳಿಕೆ ಆರೋಪ: ವಿವರಣೆ ಕೇಳಿದ ಹೈಕೋರ್ಟ್

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹಾಗೂ ಡಿ.ಸಿ.ತಮ್ಮಣ್ಣ ಅವರ ಸಂಬಂಧಿ ಸಾವಿತ್ರಮ್ಮ ವಿರುದ್ಧ ಕೇತಗಾನಹಳ್ಳಿ ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹಾಗೂ ಡಿ.ಸಿ.ತಮ್ಮಣ್ಣ ಅವರ ಸಂಬಂಧಿ ಸಾವಿತ್ರಮ್ಮ ವಿರುದ್ಧ ಕೇತಗಾನಹಳ್ಳಿ ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಈ ಕುರಿತಂತೆ ಸಮಾಜ ಪರಿವರ್ತನಾ ಸಮಯದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್‌. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಪ್ರಕರಣದ ಬಗ್ಗೆ 2014ರಲ್ಲಿ ಲೋಕಾಯುಕ್ತರು ಹೊರಡಿಸಿದ್ದ ಆದೇಶದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದೆ.

ಅರ್ಜಿದಾರರ ಪರ ವಕೀಲರು, ‘ಕರ್ನಾಟಕ ಲೋಕಾಯುಕ್ತ 2014ರ ಆ.5ರಂದು ಹದಿನೈದು ದಿನಗಳಲ್ಲಿ ಭೂ ಒತ್ತುವರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದರೂ ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿಕೊಂಡಿರುವ 54 ಎಕರೆ ತೆರವುಗೊಳಿಸಲು ಏನೂ ಕ್ರಮ ಕೈಗೊಂಡಿಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಅಲ್ಲದೆ ‘ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಆಸ್ತಿ ಮಾರುಕಟ್ಟೆ ಮೌಲ್ಯ ಪ್ರತಿ ಎಕರೆಗೆ ಸುಮಾರು 75 ಲಕ್ಷದಿಂದ 1 ಕೋಟಿ ರೂ. ಇದೆ. ಆ ಭೂಮಿಗಳನ್ನು ಕುಮಾರಸ್ವಾಮಿ ಮತ್ತಿತರರು ಪ್ರತಿ ಎಕರೆಗೆ ಆಗ ಮಾರುಕಟ್ಟೆ ಮೌಲ್ಯ 25ರಿಂದ 30 ಸಾವಿರ ಇದ್ದರೂ ಕೇವಲ ಎಕರೆಗೆ 5 ಸಾವಿರ ರೂ.ಗಳಂತೆ ಕರ್ನಾಟಕ ಭೂ ಕಂದಾಯ ಕಾಯಿದೆಯನ್ನು ಉಲ್ಲಂಘಿಸಿ ಖರೀದಿಸಲಾಗಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗಿದೆ. ಹಾಗಾಗಿ ಲೋಕಾಯುಕ್ತರ ಆದೇಶದ ಮೇಲೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!