ಸಾಂದರ್ಭಿಕ ಚಿತ್ರ 
ರಾಜ್ಯ

ಯಾದಗಿರಿ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಆಟೋ; ಸ್ಥಳದಲ್ಲೇ ಮೂವರು ಸಾವು

ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಗೂಡ್ಸ್ ಆಟೊ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಹಲಗೇರಾ ಗೇಟ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಯಾದಗಿರಿ: ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಗೂಡ್ಸ್ ಆಟೊ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಹಲಗೇರಾ ಗೇಟ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದ ಸಿದ್ದಮ್ಮ ಹಾಗೂ ರಮೇಶ ಮತ್ತು ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಪಾಷಾ ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಸಿದ್ದಮ್ಮ ಮತ್ತು ರಮೇಶ ತಾಯಿ ಮಗ ಎಂದು ತಿಳಿದು ಬಂದಿದೆ.

ತಾಲ್ಲೂಕಿನ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಗೆ ವಿಜಯಪುರದಿಂದ ಕಬ್ಬು ಸಾಗಿಸುತ್ತಿದ್ದ ಲಾರಿಯನ್ನು ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಲಾಗಿತ್ತು. 

ಆಟೋ ಯಾದಗಿರಿಯಿಂದ ವಡೇಗೇರಾದ ಕಡೆ ತೆರೆಳುತ್ತಿತ್ತು. ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು, ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ವಡಗೇರಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT