ಮಂಗಳೂರು ಗಲಭೆ: ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ವ್ಯಂಗ್ಯ! 
ರಾಜ್ಯ

ಮಂಗಳೂರು ಗಲಭೆ: ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ವ್ಯಂಗ್ಯ! 

ಮಂಗಳೂರು ಗಲಭೆ ವಿಷಯವಾಗಿ ಮಾಜಿ ಸಿಎಂ  ಎಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. 

ಬೆಂಗಳೂರು: ಮಂಗಳೂರು ಗಲಭೆ ವಿಷಯವಾಗಿ ಮಾಜಿ ಸಿಎಂ  ಎಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. 

ಸಿಡಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ, ಆದರೆ ರಾಜ್ಯದಲ್ಲಿ ಈ ವರೆಗೂ ಬಿಡುಗಡೆಯಾದ ಸಿಡಿಗಳ ಸಂಖ್ಯೆ ನೋಡಿದರೆ ಈ ವೇಳೆಗೆ ಅದೆಷ್ಟು ಜನ ಜೈಲಿಗೆ ಹೋಗಬೇಕಿತ್ತು, ಸಿಡಿಗಳು ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದು ವ್ಯಂಗ್ಯವಾಡಿದ್ದಾರೆ. 

ತಮ್ಮ ತಾತ್ಕಾಲಿಕ ಲಾಭಕ್ಕಾಗಿ ಕೆಲವರು ಜನರನ್ನ ದಾರಿ ತಪ್ಪಿಸುತ್ತಾರೆ, ಕುಮಾರಸ್ವಾಮಿ ಇದರಲ್ಲಿ ನಿಸ್ಸೀಮರು, ಘಟನೆ ನಡೆದ ಕೆಲವೇ ದಿನಗಳಲ್ಲಿ ಸಿಡಿ ಬಿಡುಗಡೆ ಮಾಡಬಹುದಿತ್ತು. ಸಿಡಿ ರೆಡಿ ಮಾಡಲು ಇಷ್ಟು ದಿನ ಬೇಕಿತ್ತಾ? ಎಂದು ಸದಾನಂದ ಗೌಡ ಪ್ರಶ್ನಿಸಿದ್ದಾರೆ. 

ಅವರ ಜನಕ್ಕೆ ಪೊಲೀಸ್ ವೇಷ ಹಾಕಿಸಿ ಎಲ್ಲಾ ವ್ಯವಸ್ಥೆ ಮಾಡಿ ಸಿಡಿ ತಯಾರಿಸಿರಬೇಕು ಎಂದು ಡಿವಿಎಸ್ ಹೇಳಿದ್ದು, ಸಿಡಿ ಬಿಡುಗಡೆ ಮಾಡಿರುವ ಹಿಂದೆ ದೊಡ್ಡ ಹುನ್ನಾರವಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT