ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸ್ಕೂಟರ್‌ಗೆ ಲಾರಿ ಡಿಕ್ಕಿ; ತಾಯಿ ಸಾವು, ಮಗ ಗಂಭೀರ

ಸ್ಕೂಟರ್‌ವೊಂದಕ್ಕೆ ಅಡುಗೆ ಅನಿಲ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ತಾಯಿ ಮೃತಪಟ್ಟರೆ, ಮಗ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿರುವ ದುರ್ಘಟನೆ  ಯಶವಂತಪುರ ಎಂಇಎಸ್ ರಿಂಗ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ

ಬೆಂಗಳೂರು: ಸ್ಕೂಟರ್‌ವೊಂದಕ್ಕೆ ಅಡುಗೆ ಅನಿಲ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ತಾಯಿ ಮೃತಪಟ್ಟರೆ, ಮಗ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿರುವ ದುರ್ಘಟನೆ  ಯಶವಂತಪುರ ಎಂಇಎಸ್ ರಿಂಗ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ನೆಲಗದರನಹಳ್ಳಿಯ  ಮುತ್ಯಾಲಮ್ಮ (45)ಮೃತಪಟ್ಟವರು. ಅವರ ಪುತ್ರ ಮುರಳಿ  ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ

ಮುತ್ಯಾಲಮ್ಮ ಅವರು ಜಾಲಹಳ್ಳಿಯ ಸಂಬಂಧಿಕರ ಮನೆಗೆ ರಾತ್ರಿ ಪುತ್ರ ಮುರಳಿಯ ಸ್ಕೂಟರ್‌ನಲ್ಲಿ ಹಿಂದೆ ಕುಳಿತುಕೊಂಡು ನೆಲಗದರನಹಳ್ಳಿಯಿಂದ  ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. 


ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ  ಗಾಯಗೊಂಡಿದ್ದ ಮುತ್ಯಾಲಮ್ಮ ಅವರನ್ನು ಕೂಡಲೇ ಎಂಎಸ್ ರಾಮಯ್ಯ ಆಸ್ಪತ್ರೆಗೆ  ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಯಶವಂತಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!