ರಾಜ್ಯ

ಬೆಂಗಳೂರು: ಜೂಜು ಅಡ್ಡೆ ಮೇಲೆ ಸಿಸಿಬಿ ದಾಳಿ, ನಾಲ್ವರ ಬಂಧನ

Vishwanath S

ಬೆಂಗಳೂರು: ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ. 

ನಗರದ  ಸವೇರಾ ಹೋಟೆಲ್ ಬಳಿ ಡಿಕ್ಯೂ ಮೆಡಿಕಲ್ ಅಂಗಡಿಯ ಮುಂಭಾಗದಲ್ಲಿ ಸಾರ್ವಜನಿಕರಿಂದ ಹಣ  ಕಟ್ಟಿಸಿಕೊಂಡು ಮಟ್ಕಾ ಜೂಜು ದಂಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ  ಸಿಸಿಬಿ ಪೊಲೀಸರು ಶುಕ್ರವಾರ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 50,000ರೂ,7  ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

SCROLL FOR NEXT