ಡಾ ಎಂ ಚಿದಾನಂದ ಮೂರ್ತಿ(ಸಂಗ್ರಹ ಚಿತ್ರ) 
ರಾಜ್ಯ

ಹಿರಿಯ ಸಾಹಿತಿ ಚಿಮೂ ನಿಧನಕ್ಕೆ ನಾಡಿನ ಗಣ್ಯರ ಸಂತಾಪ

ಕನ್ನಡದ ಹಿರಿಯ ಸಾಹಿತಿ ಡಾ ಎಂ ಚಿದಾನಂದ ಮೂರ್ತಿಯವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಡಾ ಎಂ ಚಿದಾನಂದ ಮೂರ್ತಿಯವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.


ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು  ಎಂದಿದ್ದಾರೆ.


ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಚಿದಾನಂದ ಮೂರ್ತಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಸಂಶೋಧನೆ ಮತ್ತು ಸಾಹಿತ್ಯದ‌ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು‌ ಮೀರಿದ ಸ್ನೇಹ ಶೀಲ ಗುಣವನ್ನೂ ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

ಹಿರಿಯ ಸಾಹಿತಿ,ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು.

ಅವರ ಸಂಶೋಧನೆ ಮತ್ತು ಸಾಹಿತ್ಯದ‌ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು‌ ಮೀರಿದ ಸ್ನೇಹ ಶೀಲ ಗುಣವನ್ನೂ
ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/VDFzUwiekx


ಸಂಸದ ಪ್ರತಾಪ್ ಸಿಂಹ, ಸಾಹಿತಿಗಳಾದ ಎಸ್ ಎಲ್ ಭೈರಪ್ಪ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?

ಅಮೆರಿಕ-ಇರಾನ್ ಶಾಂತಿ ಒಪ್ಪಂದ 'ಈಗ ಸಂಪೂರ್ಣ: ಜೂನ್ 19 ರಂದು ಸಹಿ ಹಾಕಿದ ಬಳಿಕ ಹಾರ್ಮುಜ್ ರೀ ಓಪನ್- ಡೊನಾಲ್ಡ್ ಟ್ರಂಪ್ ಘೋಷಣೆ!

Stanford Graduation Ceremony: ಗೂಗಲ್ CEO ಸುಂದರ್ ಪಿಚೈ ವೇದಿಕೆ ಏರುತ್ತಿದ್ದಂತೆಯೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು! Video

"Are You Taking Something?": ರಕ್ತ ಪರೀಕ್ಷೆ ಮಾಡಿಸು, ಯೂಟ್ಯೂಬರ್ ಐಶೋಸ್ಪೀಡ್ ಕಾಲೆಳೆದ ರೊನಾಲ್ಡೊ! Video ವೈರಲ್

ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ತಾಯಿಯ ಬಗ್ಗೆ ಯಾರಿಗೂ ಗೊತ್ತಿಲ್ಲದ ಮಾಹಿತಿ ಬಿಚ್ಚಿಟ್ಟ ಬ್ಯಾಲದ ಕೋಚ್! VIDEO

SCROLL FOR NEXT