ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ : ಸನಾತನ ಸಂಸ್ಥೆ

ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸನಾತನ ಸಂಸ್ಥೆ ಹೇಳಿದೆ.

ಪಣಜಿ: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸನಾತನ ಸಂಸ್ಥೆ ಹೇಳಿದೆ.

ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ರಿಷಿಕೇಶ್ ದೇವದಿಕರ್ ಅವರನ್ನು ಬಂಧಿಸಿದ್ದಾರೆ ಎಂದು ನಮಗೆ ತಿಳಿದಿದೆ ಅವರನ್ನು ಜಾರ್ಖಂಡ್‌ನಲ್ಲಿ ಬಂಧಿಸಲಾಯಿತು. ನಾವು ಈ ವಿಷಯದ ಬಗ್ಗೆ ಹೆಚ್ಚಿನ ವಿಚಾರಣೆಗೆ ಮುಂದಾಗಿದ್ದೇವೆ” ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಚೇತನ್ ರಾಜನ್ಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮಾಹಿತಿಯ ಪ್ರಕಾರ, ದೇವದಿಕರ್ ಕೆಲವು ವರ್ಷಗಳ ಹಿಂದೆ ನಮ್ಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು; ಆದರೆ ಅವರು ಕಳೆದ ಎಂಟು-ಹತ್ತು ವರ್ಷಗಳಿಂದ ಸಕ್ರಿಯವಾಗಿಲ್ಲ. 

ಈ ಮಧ್ಯೆ ಬೇರೆ ಯಾವುದೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ನಮಗೆ ತಿಳಿದಿತ್ತು. ಸನಾತನ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಯಾರಾದರೂ ಈಗ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದಾಗ ಸನಾತನ ಸಂಸ್ಥೆಯನ್ನು ದೂಷಿಸುವುದು ಸಂಪೂರ್ಣವಾಗಿ ಸೂಕ್ತವಲ್ಲ. 

ಸನಾತನ ಸಂಸ್ಥೆಯು ಆಧ್ಯಾತ್ಮಿಕತೆಯನ್ನು ಹರಡುವ ಕೆಲಸವನ್ನು ಮಾಡುತ್ತದೆ. ಸನಾತನ್ ಸಂಸ್ಥೆಯು ಈ ಪತ್ರಿಕಾ ಪ್ರಕಟಣೆಯ ಮೂಲಕ ಯಾವುದೇ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುತ್ತದೆ, ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ, ಸರಳತೆಗೆ ಫ್ಯಾನ್ಸ್ ಫಿದಾ! Video

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ, ಟ್ರಂಪ್ ಆಕ್ರೋಶ!