ರಾಜ್ಯ

ಮರಡು ಕಟ್ಟಡ ನೆಲಸಮದಿಂದ ಪ್ರೇರಣೆ: ನಗರದಲ್ಲೂ ಅಕ್ರಮ ಕಟ್ಟಡ ತೆರವಿಗೆ ಬಿಬಿಎಂಪಿ ಚಿಂತನೆ

Manjula VN

ಬೆಂಗಳೂರು: ಕೇರಳದ ಕೊಚ್ಚಿಯಲ್ಲಿರುವ ಮರಡುವಿನಲ್ಲಿ ಬಹು ಅಂತಸ್ತಿನ ಕಟ್ಟಡ ನೆಲಸಮ ಮಾಡಿದ ಪ್ರಕರಣದಿಂದ ಪ್ರೇರಣೆಗೊಂಡಿರುವ ಬಿಬಿಎಂಪಿ ಅಧಿಕಾರಿಗಳು, ಇದೀಗ ನಗರದಲ್ಲೂ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ಚಿಂತನೆ ನಡೆಸುತ್ತಿದೆ. 

ನಗರದಲ್ಲಿ ಶೇಕಡ 90ರಷ್ಟು ಕಟ್ಟಡಗಳು ಕಾನೂನು ಬಾಹಿರವಾಗಿದ್ದು, ಅತಿಯಾಗಿ ಕಾನೂನು ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು ಹೇಳಿದ್ದಾರೆ. 

ಸುಪ್ರೀಂಕೋರ್ಟ್ ಆದೇಶದಂತೆ ಕೇರಳದ ಎರ್ನಾಕುಲಂನಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 350 ವಸತಿ ಸಮುಚ್ಚಯವನ್ನು ನೆಲಸಮಗೊಳಿಸಲಾಗಿದೆ. ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯ ನಿರಂತರವಾಗಿ ನಡೆಯುತ್ತಿದೆ. ನಗರದ ಶೇ.90ರಷ್ಟು ಕಟ್ಟಡಗಳು ಒಂದಲ್ಲ ಒಂದು ರೀತಿಯಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದೆ. ಆದರೆ, ಭಾರೀ ಪ್ರಮಾಣದಲ್ಲಿ ಕಾನೂನು ಉಲ್ಲಂಘಿಸಿ ನಿರ್ಮಿಸಿದ ಕಟ್ಟಡಗಳನ್ನು ಬಿಬಿಎಂಪಿ ತೆರವುಗೊಳಿಸಲಿದೆ ಎಂದು ತಿಳಿಸಿದರು.

ಈ ವರೆಗೆ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ 2,626 ಕಟ್ಟಡಗಳನ್ನು ಗುರುತಿಸಲಾಗಿದೆ. ಈ ಪೈಕಿ 1,600 ಕಟ್ಟಡಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಮುಂದುವರಿಯಲಿದೆ. ನಗರದಲ್ಲಿ 10 ಕೆರೆ ವ್ಯಾಪ್ತಿಯಲ್ಲಿಯೂ ಅಕ್ರಮ ಕಟ್ಟಡಗಳು ನಿರ್ಮಾಣ ಆಗಿರುವುದನ್ನು ಪತ್ತೆ ಮಾಡಲಾಗಿದ್ದು, ಇದನ್ನು ಕೂಡಲೇ ತೆರವು ಮಾಡಲಾಗುವುದು ಎಂದಿದ್ದಾರೆ. 

SCROLL FOR NEXT