ಮೂರು ವಾಹನಗಳ ಡಿಕ್ಕಿ: ಓರ್ವ ವ್ಯಕ್ತಿ ಸಾವು, 7 ಮಂದಿಗೆ ಗಾಯ
ನಗರದ ಹೊರವಲಯದಲ್ಲಿ ಮಂಗಳವಾರ ನಡೆದ ಮೂರು ವಾಹನಗಳ ಡಿಕ್ಕಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಧಾರವಾಡ: ನಗರದ ಹೊರವಲಯದಲ್ಲಿ ಮಂಗಳವಾರ ನಡೆದ ಮೂರು ವಾಹನಗಳ ಡಿಕ್ಕಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಕಾರು ವ್ಯಾನ್ ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು, ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ವ್ಯಾನ್ ಚಾಲಕ ಲಕ್ಷ್ಮಣ ಗೌಡ ಪಾಟೀಲ್ (35) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಧಾರವಾಡದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.