ಬೈಕ್ ನಿಂದ ಬಿದ್ದ ಮಹಿಳೆ ಬಸ್ಸಿನ ಚಕ್ರಕ್ಕೆ ಸಿಲುಕಿ ಸಾವು
ಬೈಕ್ ನಿಂದ ಬಿದ್ದ ಮಹಿಳೆಯೊಬ್ಬರು ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ನಗರದ ರಾಷ್ಟ್ರಪತಿ ಚೌಕ್ ಬಳಿ ಸಂಭವಿಸಿದೆ.
ಕಲಬುರಗಿ: ಬೈಕ್ ನಿಂದ ಬಿದ್ದ ಮಹಿಳೆಯೊಬ್ಬರು ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ನಗರದ ರಾಷ್ಟ್ರಪತಿ ಚೌಕ್ ಬಳಿ ಸಂಭವಿಸಿದೆ.
55 ವರ್ಷದ ನಸೀಮಾ ಬೇಗಂ ಮೃತ ದುರ್ದೈವಿ. ನಸೀಮಾ ಬೇಗಂ ತಮ್ಮ ಪತಿ ಮೆಹಬೂಬ್ ಸಾಹೇಬ್ ಜೊತೆ ಬೈಕ್ ಮೇಲೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ದಂಪತಿ ನೆಲದ ಮೇಲೆ ಬಿದ್ದಿದ್ದಾರೆ.
ಪತಿ ಒಂದೆಡೆ ಬಿದ್ದರೆ, ಎದುರಿನಿಂದ ಬರುತ್ತಿದ್ದ ಬಸ್ಸಿನ ಚಕ್ರ ಹರಿದು ಪತ್ನಿ ನಸೀಮಾ ಬೇಗಂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪತಿ ಮೆಹಬೂಬ್ ಸಾಬ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ನಗರ ಸಂಚಾರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.