ರಾಜ್ಯ

ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸಂಚು!: ಡಿ.22 ರಂದು ತಪ್ಪಿತ್ತು ಭಾರಿ ಅನಾಹುತ! 

Srinivas Rao BV

ಬೆಂಗಳೂರು: ಸಿಎಎ ಕುರಿತ ಜಾಗೃತಿ ಕಾರ್ಯಕ್ರಮದ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸಂಚು ರೂಪಿಸಲಾಗಿತ್ತು ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. 

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು, ಕಾಯ್ದೆ ಪರವಾಗಿ ಡಿ.22 ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರನ್ನು ಹತ್ಯೆ ಮಾಡಲು ಸ್ಕೆಚ್ ಹಾಕಲಾಗಿತ್ತು ಎಂಬುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. 

ಇದಕ್ಕೆ ಪೂರಕವೆಂಬಂತೆ, ಸಿಎಎ ಜಾಥಾ ಮುಗಿಸಿ ತೆರಳುವಾಗ ಆರ್​ಎಸ್​ಎಸ್​ ಕಾರ್ಯಕರ್ತ ವರುಣ್ ಮೇಲೆ ಜೆ.ಸಿ ನಗರದ ರಸ್ತೆಯಲ್ಲಿ 6 ಜನ ಎಸ್​ಡಿಪಿಐ ಕಾರ್ಯಕರ್ತರು ಕೊಲೆಗೆ ಯತ್ನಿಸಿದ್ದರು. 

ಪ್ರಕರಣಕ್ಕೆ ಸಂಬಂಧಿಸಿ ಸಾಧಿಕ್, ಅಕ್ಬರ್ ಸೇರಿದಂತೆ 6 ಜನರನ್ನ ಪೊಲೀಸರು ಬಂಧಿಸಿದ್ದರು. ಈ ಆರೋಪಿಗಳ ವಿಚಾರಣೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರನ್ನು ಹತ್ಯೆ ಮಾಡುವ ಯೋಜನೆಯ ವಿಚಾರ ಬೆಳಕಿಗೆ ಬಂದಿದೆ.

"ವರುಣ್ ನಮ್ಮ ಟಾರ್ಗೆಟ್ ಆಗಿರಲಿಲ್ಲ. ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆ ನಮ್ಮ ಉದ್ದೇಶವಾಗಿತ್ತು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಸಿಎಎ ಪರವಾಗಿ ಮಾತನಾಡುತ್ತಿದ್ದದ್ದು ಈ ಆರೋಪಿಗಳನ್ನು ಕೆರಳಿಸಿತ್ತು. ಈ ಕಾರಣದಿಂದ ಜನಸಂದಣಿ ಹೆಚ್ಚಿರುವ ಭಾಗದಲ್ಲಿ ಹತ್ಯೆ ಸುಲಭ ಸಾಧ್ಯ ಎಂದು ಆರೋಪಿಗಳು ಸಂಚು ರೂಪಿಸಿದ್ದನ್ನು ಪೊಲೀಸ್ ಇಲಾಖೆ ಬಹಿರಂಗಪಡಿಸಿದೆ. 

SCROLL FOR NEXT