ಡಾ.ರಾ ಸತ್ಯನಾರಾಯಣ 
ರಾಜ್ಯ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ ವಿಧಿವಶ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ (93) ಅವರು ಗುರುವಾರ ರಾತ್ರಿ ಜಯನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೈಸೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ (93) ಅವರು ಗುರುವಾರ ರಾತ್ರಿ ಜಯನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರಿಗೆ ಪುತ್ರ ರಾ.ಸ.ನಂದಕುಮಾರ್ ಹಾಗೂ ಪುತ್ರಿ ರೋಹಿಣಿ ಸುಬ್ಬರತ್ನಂ ಇದ್ದಾರೆ.

ನಿವಾಸದಲ್ಲಿ ಶುಕ್ರವಾರ ಮಧ್ಯಾಹ್ನ 1.30ರವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಸಂಜೆ 4.30ಕ್ಕೆ  ಅಂತ್ಯಸಂಸ್ಕಾರವು ಮೈಸೂರು– ಬೆಂಗಳೂರು ರಸ್ತೆಯ ಕೆಂಗಲ್ ಗ್ರಾಮದ ಬಳಿಯ ‘ರಸ ಋಷಿ’ ಆಶ್ರಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಯಚಾಮರಾಜ ಒಡೆಯರ್ ಅವರ ಆಸ್ಥಾನದಲ್ಲಿ ಸಂಗೀತ ವಿದ್ವಾಂಸರಾಗಿದ್ದ ರಾಮಯ್ಯ ಅವರ ಪುತ್ರರಾದ ಇವರು ಸಂತ ತ್ಯಾಗರಾಜ ಸಂಗೀತ ಪರಂಪರೆಯನ್ನು ಮುಂದುವರಿಸಿದವರು. ಇವರಿಗೆ ಕಾಶಿ ವಿಶ್ವವಿದ್ಯಾಲಯದಿಂದ ಮಹೋಪಧ್ಯಾಯ, ರಾಜ್ಯ ಸಂಗೀತ ವಿದ್ವಾನ್, ಸಂಗೀತ ನಾಟಕ ಅಕಾಡೆಮಿ ರತ್ನ, ವೀಣೆ ರಾಜಾರಾವ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT