ರಾಜ್ಯ

ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ: ರಾಜ್ಯದಲ್ಲಿ 64.65 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

Raghavendra Adiga

ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ನಾಳೆ ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಮಗುವಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ 64 ಲಕ್ಷದ 65 ಸಾವಿರದ 561 ಮಕ್ಕಳಿಗೆ ಪೋಲಿಯೋ ಹನಿ ಹಾಕಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕಾಗಿ 33 ಸಾವಿರದ 21 ಬೂತ್‌ಗಳನ್ನು ಸ್ಥಾಪಿಸಿದೆ. 46 ಸಾವಿರದ 620 ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಪ್ರತಿ ಹಳ್ಳಿ, ನಗರ ಪಟ್ಟಣ ಪ್ರದೇಶಗಳಲ್ಲದೇ ಗುಡ್ಡಗಾಡು ಪ್ರದೇಶ, ತೋಟದ ಮನೆ, ರೈಲು ನಿಲ್ದಾಣ, ಮೆಟ್ರೋ, ವಿಮಾನ ನಿಲ್ದಾಣಗಳಲ್ಲಿಯೂ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ.

SCROLL FOR NEXT