ರಾಷ್ಟ್ರೀಯ ಪಲ್ಸ್ ಪೋಲಿಯೋಗೆ ಚಾಲನೆ ನೀಡಿದ ಶ್ರೀರಾಮುಲು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ನೀಡಿದರು.
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ನೀಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ಭಾನುವಾರ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಹಾಕಲಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಚಿಕ್ಕಜಾಲದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಮ್ಮ ಮಕ್ಕಳ ಜೊತೆಗೂಡಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರತಿ ವರ್ಷ ಮುಖ್ಯಮಂತ್ರಿಗಳು ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದರು. ಆದರೆ, ಈ ಬಾರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಿರುವ ಹಿನ್ನೆಲೆ, ಮುಖ್ಯಮಂತ್ರಿಗಳ ಬದಲಾಗಿ ಆರೋಗ್ಯ ಸಚಿವ ಶ್ರೀರಾಮುಲು ಲಸಿಕೆ ಹಾಕಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.