ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ರಾಜ್ಯ

ಜನವರಿ 27ಕ್ಕೆ ಮಂಗಳೂರಿಗೆ ರಾಜನಾಥ್ ಸಿಂಗ್, ಸಿಎಎ ಪರ ಬೃಹತ್ ಸಮಾವೇಶದಲ್ಲಿ ಭಾಗಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜನವರಿ 27 ರಂದು ಮಂಗಳೂರಿನಲ್ಲಿ ನಡೆಯುವ ಪೌರತ್ವ ತಿದ್ದುಪಡಿ ಮಸೂದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಕುರಿತ ಬೃಹತ್ ಜಾಗೃತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಂಗಳೂರು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜನವರಿ 27 ರಂದು ಮಂಗಳೂರಿನಲ್ಲಿ ನಡೆಯುವ ಪೌರತ್ವ ತಿದ್ದುಪಡಿ ಮಸೂದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಕುರಿತ ಬೃಹತ್ ಜಾಗೃತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ನಗರದ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 1 ಲಕ್ಷಕ್ಕೂ ಹೆಚ್ಚು ಜನರು  ಹಾಜರಾಗುವ ನಿರೀಕ್ಷೆಯಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಇದೇ ವೇಳೆ ಅಂದು ಮಂಗಳುರಿನ ಎಲ್ಲಾ ವ್ಯಾಪಾರಿಗಳು ಮತ್ತು ವ್ಯಾಪಾರ ಸಂಸ್ಥೆಗಳು ಒಂದು ದಿನ ತಮ್ಮ ವ್ಯವಹಾರವನ್ನು ನಿಲ್ಲಿಸಿ ಸಿಎಎ ಮತ್ತು ಎನ್‌ಆರ್‌ಸಿಯನ್ನು ಬೆಂಬಲಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಎರಡೂ ಜಿಲ್ಲೆಗಳ ಬಿಜೆಪಿ ಶಾಸಕರು ಮತ್ತು ಇತರೆ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ NI-MO ಮೋಡಿ: NDA ಪ್ರಚಂಡ ಗೆಲುವು; ಅತಿದೊಡ್ಡ ಪಕ್ಷವಾಗಿ BJP; ಕುಸಿದ ತೇಜಸ್ವಿ ಯಾದವ್; Congress ಸ್ಥಿತಿ ಹೀನಾಯ!

ಬಿಹಾರ ಚುನಾವಣೆ 2025: ಸೋತು ಗೆದ್ದ ತೇಜಸ್ವಿ ಯಾದವ್; ಕುಟುಂಬದ ಭದ್ರಕೋಟೆ ರಾಘೋಪೂರ್ ಉಳಿಸಿಕೊಳ್ಳಲು ಸುಸ್ತೋ ಸುಸ್ತು!

Bihar Election Results 2025: ಬಿಹಾರದ ಅಲಿನಗರ ಕ್ಷೇತ್ರದಲ್ಲಿ ಇತಿಹಾಸ ನಿರ್ಮಿಸಿದ BJP ಅಭ್ಯರ್ಥಿ ಮೈಥಿಲಿ ಠಾಕೂರ್!

ಬಿಹಾರದಲ್ಲಿ Congress ಹೀನಾಯ ಹಿನ್ನಡೆ: 'ಸೋಲಿನ ಸರದಾರ' ರಾಹುಲ್ ಗಾಂಧಿಗೆ ಇದು '95 ನೇ ಸೋಲು'!

Video: ಕಂಬಳಿ ಹೊದ್ದು ದಂಪತಿಗಳ 'ಕಾಮಕೇಳಿ', ಪೊದೆಯಲ್ಲಿ ಮತ್ತೊಂದು ಜೋಡಿಯ 'ಕಳ್ಳಾಟ': ಜಿಲ್ಲಾಸ್ಪತ್ರೆ ವಿರುದ್ಧ ಕೆಂಗಣ್ಣು

SCROLL FOR NEXT