ಬೆಂಗಳೂರು: ಅನುಮಾನಾಸ್ಪದ ಸ್ಫೋಟ: ಶಾಸಕ ಹ್ಯಾರಿಸ್ ಸೇರಿ ನಾಲ್ವರಿಗೆ ಗಾಯ 
ರಾಜ್ಯ

ಬೆಂಗಳೂರು: ಅನುಮಾನಾಸ್ಪದ ಸ್ಫೋಟ, ಶಾಸಕ ಹ್ಯಾರಿಸ್ ಸೇರಿ ನಾಲ್ವರಿಗೆ ಗಾಯ

ಸಿಲಿಕಾನ್ ಸಿಟಿ ಬೆಂಗಳೂರಿನ ವಿವೇಕನಗರದಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ ಪರಿಣಾಮ ಶಾಸಕ ಎನ್‌.ಎ.ಹ್ಯಾರಿಸ್‌ ಸೇರಿದಂತೆ ಕೆಲವರಿಗೆ ಗಾಯವಾಗಿರುವ ಘಟನೆ ಇಂದು ಸಂಜೆ ಸಂಭವಿಸಿದೆ. 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಿವೇಕನಗರದಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ ಪರಿಣಾಮ ಶಾಸಕ ಎನ್‌.ಎ.ಹ್ಯಾರಿಸ್‌ ಸೇರಿದಂತೆ ಕೆಲವರಿಗೆ ಗಾಯವಾಗಿರುವ ಘಟನೆ ಇಂದು ಸಂಜೆ ಸಂಭವಿಸಿದೆ.

ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಪಾಲ್ಗೊಂಡಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ತಕ್ಷಣ ಶಾಸಕರು ಸೇರಿದಂತೆ ಗಾಯಗೊಂಡವರನ್ನು ಸೈಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿವೇಕನಗರದಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹಾರಿಸ್ ಅವರು ವೇದಿಕೆಯಲ್ಲಿ ಕುಳಿತಿದ್ದರು. ಈ ವೇಳೆ ವಸ್ತುವೊಂದು ಬಂದು ಅಪ್ಪಳಿಸಿ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೋಲೀಸರು, ಶ್ವಾನದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಈ ಕುರಿತು ಶಾಸಕರ ಪುತ್ರ ನಲಪಾಡ್ ಪ್ರತಿಕ್ರಯಿಸಿದ್ದು "ಇದೊಂದು ಪೂರ್ವನಿಯೋಜಿತ ಕೃತ್ಯ, ಯಾರೋ ಉದ್ದೇಶಪೂರ್ವಕ ಮಾಡಿದ್ದಾರೆ. ತಂದೆ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯಲ್ಲಿ ಮತ್ತೊಂದು ಹಡಗಿನ ಮೇಲೆ ಇರಾನ್ ಗುಂಡಿನ ದಾಳಿ; ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ!

ಬಾಗಲಕೋಟೆ: ಪೊಲೀಸ್‌ ಠಾಣೆ ಮೇಲೆ ಲೋಕಾಯುಕ್ತ ದಾಳಿ; ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ PSI, ಕಾನ್ಸ್‌ಟೇಬಲ್ ಬಂಧನ

ದೆಹಲಿಯಲ್ಲಿ ಆಘಾತಕಾರಿ ಘಟನೆ: ಹಿರಿಯ ಅಧಿಕಾರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!

'ಕದನ ವಿರಾಮ ವಿಸ್ತರಿಸುತ್ತೇವೆ, ಇರಾನ್‌ಗೆ ಮಾತುಕತೆಗೆ ಸಮಯ ನೀಡುತ್ತೇವೆ; ಹಾರ್ಮುಜ್ ಜಲಸಂಧಿ ನಿರ್ಬಂಧ ಮುಂದುವರಿಕೆ': ಡೊನಾಲ್ಡ್ ಟ್ರಂಪ್

ಪಹಲ್ಗಾಮ್ ಉಗ್ರರ ದಾಳಿಗೆ ಒಂದು ವರ್ಷ: ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗಲ್ಲ; ಶತ್ರುಗಳಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್

SCROLL FOR NEXT