ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್: ಲಾರಿ ಹರಿದು ಮೂವರು ಸಾವು 

ಲಾರಿ ಹರಿದು ಮೂವರು ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 09ರ ಮಿನಕೇರಾ ಕ್ರಾಸ್ ಬಳಿ ಬುಧವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ.

ಬೀದರ್ : ಲಾರಿ ಹರಿದು ಮೂವರು ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 09ರ ಮಿನಕೇರಾ ಕ್ರಾಸ್ ಬಳಿ ಬುಧವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ.

ವಾಹನದ ಟೈರ್ ಜೋಡಿಸುತ್ತಿದ್ದ ವೇಳೆ ಲಾರಿ ಹರಿದು‌ ಮೂವರು‌ ಮೃತಪಟ್ಟಿದ್ದಾರೆ. ಮೃತರನ್ನು ಅನ್ಸರ್ ಬಸಂತಪೂರ್ (32), ವಿಜಯ ಕುಮಾರ್ ಬಸಂತಪೂರ್ (24), ಇಸ್ಮಾಯಿಲ್ (25) ಎಂದು ಗುರುತಿಸಲಾಗಿದೆ.

ಈ ಮೂವರು ಗೂಡ್ಸ್  ವಾಹನದಲ್ಲಿ ಈರುಳ್ಳಿ ತುಂಬಿಕೊಂಡು ಮನ್ನಾಎಖೇಳಿ ಕಡೆಗೆ ಹೊರಟಿದ್ದರು. ಈ ವೇಳೆ  ವಾಹನದ ಟೈರ್ ಪಂಕ್ಚರ್ ಆಗಿದ್ದರಿಂದ ಮಿನಕೇರಾ ಪ್ಲೈಓವರ್ ಮೇಲೆ ಮತ್ತೊಂದು ಟೈರ್ ಜೋಡಣೆ ಮಾಡುತ್ತಿದ್ದರು‌. ಈ ವೇಳೆ ಲಾರಿ ಹರಿದು ಘಟನೆ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಬೀದರ್​ ಗ್ರಾಮೀಣ ಪೊಲೀಸ ಠಾಣೆಯ ಸಿಪಿಐ ಸಾವಳಗಿ ಹಾಗೂ ಬಗದಲ್​​​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT