ರಚನ್ ಬೋಪಣ್ಣ 
ರಾಜ್ಯ

ಪುಣೆಯಲ್ಲಿ ಕೊಡಗಿನ ಯೋಧ ಅನುಮಾನಸ್ಪದ ಸಾವು

ಭಾರತೀಯ ಸೇನೆಯಲ್ಲಿ ತರಬೇತಿ ಪಡೆಯುತ್ತಿದ್ದ ಮುಗುಟಗೇರಿ ಗ್ರಾಮದ ಯೋಧ ಚೀರಂಡ ರಚನ್ ಬೋಪಣ್ಣ (22) ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪುಣೆಯ ವಸತಿಗೃಹದಲ್ಲಿ ಗುರುವಾರ ಪತ್ತೆಯಾಗಿದೆ.

ಪೊನ್ನಂಪೇಟೆ: ಭಾರತೀಯ ಸೇನೆಯಲ್ಲಿ ತರಬೇತಿ ಪಡೆಯುತ್ತಿದ್ದ ಮುಗುಟಗೇರಿ ಗ್ರಾಮದ ಯೋಧ ಚೀರಂಡ ರಚನ್ ಬೋಪಣ್ಣ (22) ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪುಣೆಯ ವಸತಿಗೃಹದಲ್ಲಿ ಗುರುವಾರ ಪತ್ತೆಯಾಗಿದೆ.

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ವಗ್ರಾಮಕ್ಕೆ ರವಾನಿಸಲು ತೊಂದರೆಯಾಗಿದೆ. ಮಧ್ಯಪ್ರದೇಶದ ಜಬಲ್ಪರುದ ಸೇನಾ ಶಿಬಿರದಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2019ರ ಏಪ್ರಿಲ್ ತಿಂಗಳಲ್ಲಿ ಸೇನೆಗೆ ಸೇರ್ಪಡೆಯಾಗಿದ್ದ, ತರಬೇತಿ ಕೊನೆಯ ಹಂತದಲ್ಲಿದ್ದ ರಚನ್ ಬೋಪಣ್ಣ ಅವರು, ಭಾನುವಾರ ಔಟ್‍ಪಾಸ್ ಪಡೆದು ಶಿಬಿರದಿಂದ ಹೊರಹೋಗಿದ್ದರು. ಮೃತದೇಹದ ಬಳಿ ಡೆತ್‌ನೋಟ್‌ ಪತ್ತೆಯಾಗಿದೆ.

ಇನ್ನು ಯೋಧ ಕಳೆದ ನವೆಂಬರ್ ನಲ್ಲಿ ಕಡೆಯ ಬಾರಿಗೆ ಮನೆಗೆ ಭೇಟಿ ಕೊಟ್ಟಿದ್ದರು. ಇದೀಗ ಘಟನಾ ಸ್ಥಳಕ್ಕೆ ಯೋಧನ ಕುಟುಂಬಿಕರು ತೆರಳಿದ್ದು ಹೆಚ್ಚಿನ ಮಾಹಿತಿ ಬರಬೇಕಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!