ಸಾಂದರ್ಭಿಕ ಚಿತ್ರ 
ರಾಜ್ಯ

ಹಳೆ ದ್ವೇಷದ ಹಿನ್ನೆಲೆ: ಬೆಂಗಳೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ಸಂತೋಷ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ಸಂತೋಷ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜಾನುಕುಂಟೆ ಮಾದಾಪುರ ರಸ್ತೆಯಲ್ಲಿ ರಾಜಾನುಕುಂಟೆ ಗ್ರಾಮದ ಸಂತೋಷ್ ಕುಮಾರ್ (25) ಕೊಲೆಯಾದವರು. ಇವರ ಮೇಲೆ ನಾಲ್ಕೈದು ಮಂದಿಯಿಂದ ಗುಂಪು ಹಲ್ಲೆ ಮಾಡಿ ಲಾಂಗ್‌ನಿಂದ ಕೊಚ್ಚಿ ಕೊಲೆ ಮಾಡಿದೆ. 

ಈ ಘಟನೆಯಲ್ಲಿ ಸಂತೋಷ್ ಕುಮಾರ್  ಸ್ನೇಹಿತನ ಕೈಬೆರಳು ಸಹ ತುಂಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆಯಾದ  ಸಂತೋಷ್ ಕುಮಾರ್ ಹಿಂದೆ ತನ್ನ ಸ್ನೇಹಿತನಾದ ರೌಡಿಶೀಟರ್ ಹರಿಕೆರೆ ವೇಣು ಮೇಲೆ ಹಲ್ಲೆ ಮಾಡಿದ್ದನು. ಈ ಪ್ರಕರಣದಲ್ಲಿ ಹಲ್ಲೆಗೊಳಗಾದ ವೇಣು ಆಸ್ಪತ್ರೆಗೆ ದಾಖಲಾಗಿ ಬದುಕುಳಿದಿದ್ದ. 

ಇತ್ತ ಹಲ್ಲೆ ಮಾಡಿದ ಸಂತೋಷ್ ಕುಮಾರ್ ಜೈಲುವಾಸ ಅನುಭವಿಸಿ ಹೊರಗಡೆ  ಬಂದಿದ್ದನು. ಹೀಗಾಗಿ ರೌಡಿಶೀಟರ್ ವೇಣು ತನ್ನ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ  ಕೃತ್ಯವನ್ನು ಮಾಡಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ರಾಜನಕುಂಟೆ ಪೊಲೀಸರು ಕೊಲೆ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ. 

ಮತ್ತೊಂದೆಡೆ ಮೃತನ ಸಂಬಂಧಿಕರು ರೌಡಿಶೀಟರ್ ವೇಣು ಹಾಗೂ ಆತನ ತಂದೆ ಸೇರಿ ಸಂತೋಷ್ ನನ್ನ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಕುವೈತ್‌ ಪ್ರಮುಖ ತೈಲ ಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ, ಭಾರೀ ಬೆಂಕಿ

ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಬೇಡ: ಟ್ರಂಪ್ ಸೂಚನೆ ಬೆನ್ನಲ್ಲೇ ಹಿಂದೆ ಸರಿದ ಇಸ್ರೇಲ್, ಇರಾನ್ 'ನಾಶವಾಗಿದೆ' ಎಂದ ನೆತನ್ಯಾಹು

ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿಯಾದರೆ ಒತ್ತಡಕ್ಕೆ ಮಣಿಯದೆ ಅನಿಯಂತ್ರಿತ ದಾಳಿ: ಇರಾನ್ ಕಠಿಣ ಎಚ್ಚರಿಕೆ

West Asia war: ಇರಾನ್ ಗ್ಯಾಸ್ ಫೀಲ್ಡ್ ಮೇಲಿನ ದಾಳಿ ‘ಸೋಲೋ ಆಪರೇಷನ್’; ಅಮೆರಿಕಾ ಪಾತ್ರವಿಲ್ಲ- ಇಸ್ರೇಲ್ ಸ್ಪಷ್ಟನೆ

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಪಾಪಣ್ಣ ಮಟನ್‌ ಸ್ಟಾಲ್‌ ಮುಂದೆ ಜನರ ಕ್ಯೂ..!

SCROLL FOR NEXT