ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ 
ರಾಜ್ಯ

'ಆರೋಪಿ ಆದಿತ್ಯ ರಾವ್ ನಮ್ಮ ಕಸ್ಟಡಿಯಲ್ಲಿದ್ದಾನೆ': ಮಂಗಳೂರು ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ 

ಕಳೆದ ಜನವರಿ 20ರಂದು ಮಂಗಳೂರು ವಿಮಾನ ನಿಲ್ದಾಣ ಸಮೀಪ ಸ್ಫೋಟಕ ಸಾಧನವನ್ನು ಇರಿಸಿದ್ದ ಆರೋಪಿ ಆದಿತ್ಯ ರಾವ್ ನನ್ನು ಬಂಧಿಸಿ ಸದ್ಯ ನಮ್ಮ ಕಸ್ಟಡಿಯಲ್ಲಿರಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ ತಿಳಿಸಿದ್ದಾರೆ.

ಮಂಗಳೂರು: ಕಳೆದ ಜನವರಿ 20ರಂದು ಮಂಗಳೂರು ವಿಮಾನ ನಿಲ್ದಾಣ ಸಮೀಪ ಸ್ಫೋಟಕ ಸಾಧನವನ್ನು ಇರಿಸಿದ್ದ ಆರೋಪಿ ಆದಿತ್ಯ ರಾವ್ ನನ್ನು ಬಂಧಿಸಿ ಸದ್ಯ ನಮ್ಮ ಕಸ್ಟಡಿಯಲ್ಲಿರಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ ತಿಳಿಸಿದ್ದಾರೆ.


ಮಂಗಳೂರಿನಲ್ಲಿ ಅವರು ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಮ್ಮ ತನಿಖಾ ತಂಡ ಆದಿತ್ಯ ರಾವ್ ನನ್ನು ಎಲ್ಲಾ ಆಯಾಮಗಳಿಂದಲೂ ತೀವ್ರ ವಿಚಾರಣೆಗೊಳಪಡಿಸಲಿದೆ. ಆತನನ್ನು ಮಂಗಳೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದರು.


ಆದಿತ್ಯ ರಾವ್ ನನ್ನು ನಿನ್ನೆ ಮಂಗಳೂರಿನ ಮೊದಲನೇ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಟ್ರಾನ್ಸಿಟ್ ವಾರಂಟ್ ಹೊರಡಿಸಿದೆ ಎಂದು ತಿಳಿಸಿದ್ದಾರೆ. 


ಮಂಗಳೂರು ವಿಮಾನ ನಿಲ್ದಾಣ ಹತ್ತಿರ ಸ್ಫೋಟಕ ಸಾಮಗ್ರಿ ಇರಿಸಿ ಇಡೀ ರಾಜ್ಯಾದ್ಯಂತ ಸುದ್ದಿಯಾಗಿದ್ದ ಆದಿತ್ಯ ರಾವ್ ನಿನ್ನೆ ಬೆಂಗಳೂರಿನಲ್ಲಿ ಪೊಲೀಸರ ಮುಂದೆ ಶರಣಾಗಿದ್ದ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್