ರಾಜ್ಯ

ನೆಲಮಂಗಲ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಪುಂಡರ ತಂಡದಿಂದ ಹಲ್ಲೆ

Shilpa D

ಬೆಂಗಳೂರು: ಆರು ಮಂದಿ ಜನರ ತಂಡವೊಂದು ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಗೇಟ್ ನಲ್ಲಿ ನಡೆದಿದೆ.

ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಸದರೇ ಡಬಲ್ ಹಣವನ್ನು ಟೋಲ್ ನಲ್ಲಿ ಪಾವತಿಸಬೇಕು.  ಬೆಳಗ್ಗಿನ ಜಾವ 2 ಗಂಟೆ ವೇಳೆಗೆ ಲಾರಿಯೊಂದು ಟೋಲ್ ಪ್ಲಾಜಾ ಪ್ರವೇಶಿಸಿತು.  ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳದ ಲಾರಿಯಲ್ಲಿ ಬಂದ ಯುವಕರಿಗೆ ಸಿಬ್ಬಂದಿ ಡಬಲ್ ಹಣವನ್ನು ಪಾವತಿಸುವಂತೆ ಸೂಚಿಸಿದ್ದಾರೆ.

ಇದರಿಂದ ಕೋಪಗೊಂಡ ಪುಂಡರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. 

ನಾಗಪುರದ ಮೂಲದ ಟೋಲ್ ಸಿಸ್ಟಮ್ ಎಂಜಿನೀಯರ್   ಅಬಿಮಾನ್ ಪಾಂಡೆ ಹಾಗೂ ಇನ್ನೋರ್ವ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಲಾಗಿದೆ. ಇದೆಲ್ಲಾ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಟೋಲ್ ಪ್ಲಾಜಾ ದಲ್ಲಿ ಹೊರ ರಾಜ್ಯದ ಯುವಕರು ಕೆಲಸ ಮಾಡುತ್ತಿದ್ದು, ಸ್ಥಳೀಯ ಸವಾರರ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

SCROLL FOR NEXT