ಅಮರನಾಥ ಶೆಟ್ಟಿ 
ರಾಜ್ಯ

ಜೆಡಿಎಸ್ ಹಿರಿಯ ಮುಖಂಡ ಮಾಜಿ ಸಚಿವ ಅಮರನಾಥ ಶೆಟ್ಟಿ ವಿಧಿವಶ

ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾ ದಳ ಮುಖಂಡ, ಹಿರಿಯ ರಾಜಕಾರ ಣಿ ಕೆ. ಅಮರನಾಥ ಶೆಟ್ಟಿ (80) ಸೋಮವಾರ ನಿಧನರಾಗಿದ್ದಾರೆ. 

ಮಂಗಳೂರು: ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾ ದಳ ಮುಖಂಡ, ಹಿರಿಯ ರಾಜಕಾರ ಣಿ ಕೆ. ಅಮರನಾಥ ಶೆಟ್ಟಿ (80) ಸೋಮವಾರ ನಿಧನರಾಗಿದ್ದಾರೆ. 

ಮೂಡಬಿದರಿಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು.  ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಆಗಿದ್ದ ಅಮರನಾಥ ಶೆಟ್ಟಿ 1965ರಲ್ಲಿ ರಾಜಕಾರಣ ಪ್ರವೇಶಿಸಿದರು. ಪಾಲಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಮೂಡುಬಿದ್ರಿ ಕ್ಷೇತ್ರದಿಂದ 1983ರಲ್ಲಿ ಶಾಸಕರಾಗಿ ವಿಧಾನಸಭೆ ಪ್ರವೇಶಸಿದರು. 1987 ಮತ್ತು 1994ರಲ್ಲಿ ಅದೇ ಕ್ಷೇತ್ರದಿಂದ ಜಯಗಳಿಸಿದ್ದರು. ಪ್ರವಾಸೋದ್ಯಮ ಮತ್ತು ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ ಸೇವಾ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು .

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ 1983, 1987 ಮತ್ತು 1994 ಹೀಗೆ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಪ್ರವಾಸೋದ್ಯಮ ಮತ್ತು ಮುಜರಾಯಿ ಸಚಿವರಾಗಿದ್ದರು. ನಂತರ ಅಭಯಚಂದ್ರ ಅವರ ಎದುರು ನಿರಂತರ ಪರಾಭವಗೊಂಡು, ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ