ರಾಜ್ಯ

ಕರ್ನಾಟಕದಲ್ಲಿ ಹೂಡಿಕೆಗೆ ಮುಂದಾದ ಲಾಕೀಡ್ ಮಾರ್ಟಿನ್ ಕಂಪೆನಿ 

Srinivas Rao BV

ಬೆಂಗಳೂರು: ಏರೋಸ್ಪೇಸ್ ವಲಯದ ಮುಂಚೂಣಿಯ ಕಂಪೆನಿ ಲಾಕೀಡ್ ಮಾರ್ಟಿನ್ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದ್ದು, ಕಂಪೆನಿಯ ಉಪಾಧ್ಯಕ್ಷ, ರಿಚರ್ಡ್ ಎಫ್. ಎಂಬ್ರೋಸ್ ಅವರು ಮುಖ್ಯಮಂತ್ರಿಗಳ ಭೇಟಿಯ ಮರುದಿನವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಕುರಿತು ಪತ್ರ ಬರೆದು, ತಮ್ಮ ಕಂಪೆನಿಯ ಭಾರತದ ಮುಖ್ಯಸ್ಥರು ಸಂಪರ್ಕಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.  

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಯವರು, “ಲಾಕೀಡ್ ಮಾರ್ಟಿನ್ ಕಂಪನಿಯ ಕಾರ್ಯಕಾರಿ ಉಪಾಧ್ಯಕ್ಷ ರಿಚರ್ಡ್ ಎಫ್ ಎಂಬ್ರೋಜ್ ಬರೆದ ಪತ್ರ ಇಂದು ತಲುಪಿದೆ. ಮೇಲ್ನೊಟಕ್ಕೆ ಇದೊಂದು ಸಾಮಾನ್ಯ ಪತ್ರವೆನಿಸಿದರು ಅದರ ಗಹನತೆಯನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ. ಲಾಕೀಡ್ ಮಾರ್ಟಿನ್ ಅಮೇರಿಕಾದ ಏರೋಸ್ಪೇಸ್ ವಲಯದ ಬೃಹತ್ ಕಂಪನಿಯಾಗಿದ್ದು ಅದು ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ಸುಕವಾಗಿದೆ ಎಂಬುದನ್ನು ತೋರಿಸುತ್ತದೆ.

ನಮ್ಮ ದಾವೋಸ್ ಭೇಟಿ ಫಲಪ್ರದವಾಗಿದೆ ಎಂದು ಹೇಳಲು ಇದು ಒಂದು ಉದಾಹರಣೆ. ಈ ಪತ್ರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಿಸುವ ಬಗ್ಗೆ ನಮ್ಮ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಇದಲ್ಲದೆ ನಮ್ಮ ದಾವೋಸ್ ಭೇಟಿ ಬಗ್ಗೆ ಅನುಮಾನ ವ್ಯಕ್ತಪಡಿಸುವವರಿಗೆ ಇದು ಉತ್ತರವಾಗಿದೆ.

ದಾವೋಸ್ ಭೇಟಿ ನಮ್ಮ ರಾಜ್ಯಕ್ಕೆ ಬಂಡವಾಳ ಹರಿದು ಬರುವಲ್ಲಿ ಮತ್ತು ನವೆಂಬರ್‍ನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ (ಜಿ.ಐ.ಎಂ) ಯಶಸ್ವಿ ಕಾಣುತ್ತೇವೆ ಎಂಬ ನಮ್ಮ ನಂಬಿಕೆ ಗಟ್ಟಿಯಾಗಿದೆ” ಎಂದು ತಿಳಿಸಿದ್ದಾರೆ.

SCROLL FOR NEXT