ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಲಬುರಗಿ: ಬೈಕ್ ಗೆ ಲಾರಿ ಡಿಕ್ಕಿ, ಜಾತ್ರೆಯಿಂದ ವಾಪಸಾಗುತ್ತಿದ್ದ ಮೂವರ ದುರ್ಮರಣ

ಬೈಕ್‌‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ಸಂಭವಿಸಿದೆ‌.

ಸಾಂದರ್ಭಿಕ ಚಿತ್ರ
Shilpa D
Updated On : 30 Jan 2020, 2:14 pm

ಕಲಬುರಗಿ: ಬೈಕ್‌‌ಗೆ ಲಾರಿಯೊಂದು  ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ  ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ಸಂಭವಿಸಿದೆ‌. 

ರಾಜಕುಮಾರ್ ಖಂಡೇಕರ್ (24), ಗುಂಡಪ್ಪಾ ಮಾನೆ (20), ಮಹಾದೇವಪ್ಪಾ ಸಾಲೆಗಾಂವ್ (30) ಮೃತ ದುರ್ದೈವಿಗಳು. 

ಜಾತ್ರಾ‌ ಮಹೋತ್ಸವದಲ್ಲಿ ಪಾಲ್ಗೊಂಡು ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Advertisement

Advertisement

ಮೃತರೆಲ್ಲರೂ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದವರು ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments