ಸೋಮಶೇಖರ್ 
ರಾಜ್ಯ

ಮೈಸೂರಿನಲ್ಲಿ ಸಂಜೆ 6 ಗಂಟೆ ನಂತರ ಸಂಪೂರ್ಣ ಬಂದ್‌: ಸಚಿವ ಸೋಮಶೇಖರ್

ಮಾಸ್ಕ್ ಹಾಕದೇ ಹೊರಬರುವವರಿಗೆ ದಂಡ ಹಾಗೂ ಸಂಜೆ 6 ಗಂಟೆ ನಂತರ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರು: ಮಾಸ್ಕ್ ಹಾಕದೇ ಹೊರಬರುವವರಿಗೆ ದಂಡ ಹಾಗೂ ಸಂಜೆ 6 ಗಂಟೆ ನಂತರ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ತರಲು ಸಾರ್ವಜನಿಕರ ಸಹಕಾರ ಹಾಗೂ ಜವಾಬ್ದಾರಿ ಸಹ ದೊಡ್ಡದು. ಈ ಹಿನ್ನೆಲೆಯಲ್ಲಿ ಇನ್ನು ಮಾಸ್ಕ್ ಹಾಕದೇ ಹೊರ ಬರುವುದು ಕಂಡರೆ ಪೊಲೀಸರು ದಂಡಹಾಕಲಿದ್ದಾರೆ ಎಂದು ಹೇಳಿದ್ದಾರೆ.

ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ 200 ರೂಪಾಯಿ ಹಾಗೂ ಗ್ರಾಮಾಂತರದಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು. ಜೊತೆಗೆ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳಬೇಕು. ಈಗ ಬಾಯಿ ಮಾತಿನಲ್ಲಿ ಹೇಳಲಾಗುತ್ತದೆ. ಆಗಲೂ ಜನತೆ ಎಚ್ಚೆತ್ತುಕೊಳ್ಳದೆ ಗುಂಪು ಗುಂಪಾಗಿ ಕಾಣಿಸಿಕೊಂಡರೆ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಐಎಲ್ಐ ಮತ್ತು ಸ್ಯಾರಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಂಗಡಿ-ಮುಂಗಟ್ಟುಗಳನ್ನು ಸಂಜೆ 6 ಗಂಟೆ ನಂತರ ಸದ್ಯದ ಮಟ್ಟಿಗೆ ಬಂದ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ. ಶುಕ್ರವಾರದಿಂದ ಮೈಸೂರು ಜಿಲ್ಲೆಯಲ್ಲಿ ಈ ಆದೇಶ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಎಪಿಎಂಸಿಯಲ್ಲಿ ವ್ಯವಹಾರ ಮಾಡುವವರಿಗೆ ಹಾಗೂ ತರಕಾರಿ ಮಾರಾಟ ಮಾಡುವವರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಿಸಲಾಗುತ್ತದೆ. ಕಾರಣ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಸೇರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ 55 ವರ್ಷ ಮೇಲ್ಪಟ್ಟವರ ಮೇಲೆ ಅದರಲ್ಲೂ ಅವರ ಆರೋಗ್ಯದ ಸ್ಥಿತಿ ನೋಡಿಕೊಂಡು ಹೆಚ್ಚಿನ ಆದ್ಯತೆ ಮಾಡಿ ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೊಳಪಡಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಚಿವರು ತಿಳಿಸಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT